Sunday, November 10, 2024
Homeರಾಷ್ಟ್ರೀಯ | Nationalವಾಣಿಜ್ಯ ಬಳಕೆಯ ಗ್ಯಾಸ್‌‍ ಸಿಲಿಂಡರ್‌ ಬೆಲೆ ಏರಿಕೆ

ವಾಣಿಜ್ಯ ಬಳಕೆಯ ಗ್ಯಾಸ್‌‍ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ,ಆ.1- ಇಂದಿನಿಂದಲೇ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಎಲ್ಪಿಜಿ ಗ್ಯಾಸ್‌‍ ಸಿಲಿಂಡರ್‌ ಬೆಲೆಯನ್ನು 6.5 ರೂ.-8.5 ರೂ. ಹೆಚ್ಚಿಸಿವೆ. ಇದರೊಂದಿಗೆ ವಾಣಿಜ್ಯ ಎಲ್ಪಿಜಿ ಗ್ಯಾಸ್‌‍ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 1,732.5 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1652.50 ಆಗಿದೆ. ಹಿಂದೆ 1,646 ರೂ. ರೂ. ಆಗಿತ್ತು. ಮುಂಬೈಯಲ್ಲಿಯೂ ಏರಿಕೆಯಾಗಿದ್ದು ಹೊಸ ಬೆಲೆಯನ್ನು 1,605 ರೂ.ಗೆ ನಿಗದಿಪಡಿಸಲಾಗಿದೆ. ಕೋಲ್ಕತ್ತಾದಲ್ಲಿ ದರ ಪರಿಷ್ಕರಣೆಯ ಬಳಿಕ 1,764.50 ರೂ. ಇದೆ.

ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ (ಐಒಸಿ), ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌ (ಬಿಪಿಸಿಎಲ್‌) ಮತ್ತು ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌ (ಎಚ್ಪಿಸಿಎಲ್‌) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತವೆ.

ಸತತ ಇಳಿಕೆಯ ಬಳಿಕ ಏರಿಕೆ :
ಕಳೆದ ಕೆಲವು ತಿಂಗಳಿಂದ ವಾಣಿಜ್ಯ ಎಲ್ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗಿತ್ತು. ಆದರೆ ಈ ಬಾರಿ ಬೆಲೆ ಏರಿಕೆಯ ಶಾಕ್‌ ತಗುಲಿದೆ. ಜುಲೈಯಲ್ಲಿ 30 ರೂ. ಕಡಿತಗೊಂಡಿದ್ದರೆ, ಜೂನ್‌ 1ರಂದು ವಾಣಿಜ್ಯ ಎಲ್ಪಿಜಿ ಗ್ಯಾಸ್‌‍ ಸಿಲಿಂಡರ್‌ ಬೆಲೆ 69.50 ರೂ. ಕಡಿಮೆ ಆಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು.

ತೈಲ ಮಾರುಕಟ್ಟೆ ಕಂಪನಿಗಳು ಕೊನೆಯ ಬಾರಿ ಮಾರ್ಚ್‌ 1ರಂದು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, ಒಎಂಸಿಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್‌‍ ಗ್ಯಾಸ್‌‍ ಸಿಲಿಂಡರ್‌ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್‌‍ ಸಿಲಿಂಡರ್‌ಗಳ ಬೆಲೆಗಳನ್ನು 25 ರೂ. ಹೆಚ್ಚಿಸಿದ್ದವು.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ :
ಈ ಮಧ್ಯೆ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ. ಇನ್ನು ದೆಹಲಿಯಲ್ಲಿ 803 ರೂ., ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ರೂ., ಚೆನ್ನೈನಲ್ಲಿ 818.50 ರೂ. ಇದೆ.

ವಿಶೇಷವೆಂದರೆ ಕಳೆದ ವರ್ಷ ಜೂನ್ನಲ್ಲಿ ದೆಹಲಿಯಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್‌ ಬೆಲೆ 1,103 ರೂ. ಇತ್ತು. ಆಗಸ್ಟ್‌ನಲ್ಲಿ ತೈಲ ಕಂಪನಿಗಳು 200 ರೂ.ಗಳ ಕಡಿತವನ್ನು ಘೋಷಿಸಿ 903 ರೂ.ಗೆ ಇಳಿಸಿದವು. ಬಳಿಕ 2024ರ ಮಾರ್ಚ್‌ನಲ್ಲಿ ಬೆಲೆಯನ್ನು ಮತ್ತೂ 100 ರೂ. ಕಡಿತಗೊಳಿಸಲಾಯಿತು.

RELATED ARTICLES

Latest News