ಬಹ್ರೈಚ್ (ಯುಪಿ), ನ.30-ಲಕ್ನೋ-ಬಹ್ರೈಚ್ ಹೆದ್ದಾರಿಯ ಜರ್ವಾಲ್ ಬಳಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿ,15 ಮಂದಿ ಗಾಯಗೊಂಡಿದ್ದಾರೆ.
ಇಂದು ಮುಂಜಾನೆ 4.30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಬಸ್‍ನ ಅಡ್ಡಬಂದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದಿನೇಶ್ ಚಂದ್ರ ಸಿಂಗ್ ತಿಳಿಸಿದ್ದಾರೆ.
ನಾಳೆಯಿಂದ ಬೆಂಗಳೂರಿನಲ್ಲಿ ಡಿಜಿಟಲ್ ರುಪಿ ಚಲಾವಣೆ
ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ 15 ಮಂದಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಬಸ್ ಲಕ್ನೋದಿಂದ ರುಪೈದೀಹಾಗೆ ಹೋಗುತ್ತಿದ್ದು, ಟ್ರಕ್ ಬಹ್ರೈಚ್ನಿಂದ ಲಕ್ನೋಗೆ ತೆರಳುತ್ತಿತ್ತು ಎಂದು ತನಿಖೆ ವೇಳೆ ತಿಳಿದುಬಂದಿದೆ.
ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸರ ಬಂಧನ
ಲಾರಿ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಸಮೀಪದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪರಾರಿಯಾಗಿರುವ ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ.
Lucknow, Bahraich, highway, bus, truck, collision, 6dead,