ರೈತರು -ಜನಸಾಮಾನ್ಯರನ್ನು ನಿರ್ಲಕ್ಷ್ಯಕ್ಕೆ ಪಂಚರಾಜ್ಯ ಚುನಾವಣೆ ಉತ್ತರ – ಎಂ.ಬಿ.ಪಾಟೀಲ್

Spread the love

m b patilಬೆಳಗಾವಿ (ಸುವರ್ಣಸೌಧ), ಡಿ.12- ಕೇಂದ್ರ ಸರ್ಕಾರ ರೈತ ಹಾಗೂ ಜನಸಾಮಾನ್ಯರನ್ನು ನಿರ್ಲಕ್ಷ್ಯ ಮಾಡಿದ ಪರಿಣಾಮ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧವಾದ ಫಲಿತಾಂಶ ಬಂದಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅವರ ಪ್ರಭಾವ ಕುಸಿದಿದೆ. ಮುಂದಿನ ಲೋಕಸಭೆ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Facebook Comments