ಕೊಚ್ಚಿ,ಫೆ.15- ಕೇರಳ ಮುಖ್ಯಮಂತ್ರಿ ಕಚೇರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಶಿವಶಂಕರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಲೈಫ್ ಮಿಷನ್ ಹಗರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್ ಅವರನ್ನು ಇಡಿ ಅಕಾರಿಗಳು ಬಂಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯುನೈಟೆಡ್ ಅರಬ್ ಎಮಿರೇಟ್ಸ್ ಕಾನ್ಸುಲೇಟ್ ಮೂಲಕ ರೆಡ್ ಕ್ರೆಸೆಂಟ್ ನೀಡಿದ 18.50 ಕೋಟಿ ರೂ.ಗಳಲ್ಲಿ 14.50 ಕೋಟಿ ಖರ್ಚು ಮಾಡಿ ತ್ರಿಶೂರ್ ಜಿಲ್ಲೆಯ ವಡಕ್ಕಂಚೇರಿಯಲ್ಲಿ 140 ಕುಟುಂಬಗಳಿಗೆ ಲೈಫ್ ಮಿಷನ್ ಯೋಜನೆಯ ಮೂಲಕ ಮನೆ ನಿರ್ಮಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಲೈಫ್ ಮಿಷನ್ ಯೋಜನೆಗೆ ಸಂಬಂಸಿದಂತೆ ಈ ಬಂಧನವಾಗಿದೆ ಎಂದು ತಿಳಿದುಬಂದಿದೆ.
ಉಳಿದ ಮೊತ್ತವನ್ನು ಬಳಸಿಕೊಂಡು ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಗುತ್ತಿಗೆ ನೀಡಲಾಗಿದೆ. ಯೋಜನೆಗಾಗಿ ಸ್ವಪ್ನಾ ಸುರೇಶ್ ಸೇರಿದಂತೆ ಆರೋಪಿಗಳು 4.48 ಕೋಟಿ ಲಂಚ ಪಡೆದಿದ್ದಾರೆ ಎಂದು ಯುನಿಟಾಕ್ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಈಪನ್ ಮಾಹಿತಿ ನೀಡಿದ್ದಾರೆ.
ಈ ಹಗರಣದಲ್ಲಿ ಶಿವಶಂಕರ್ ಅವರ ಕೈವಾಡವಿದೆ ಎಂದು ಆರೋಪಿಗಳಾದ ಸ್ವಪ್ನಾ ಸುರೇಶ್ ಮತ್ತು ಸರಿತ್ ಪಿಎಸ್ ಆರೋಪಿಸಿದ್ದ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
#MSivasankar, #arrested, #ED, #LifeMissionCase,