ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪ್ರಥಮ ಆದ್ಯತೆ : ಎಂ.ಎ. ಸಲೀಂ

Social Share

ಬೆಂಗಳೂರು, ನ.15- ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಪ್ರಥಮ ಆದ್ಯತೆ ನೀಡಲಾಗುತ್ತದೆ ಎಂದು ನಗರದ ನೂತನ ಸಂಚಾರ ವಿಭಾಗದ ವಿಶೇಷ ಆಯುಕ್ತರಾದ ಎಂ.ಎ. ಸಲೀಂ ಅವರು ತಿಳಿಸಿದ್ದಾರೆ.

ಅಧಿಕಾರ ವಹಿಸಿಕೊಂಡ ನಂತರ ಈ ಸಂಜೆಯೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಎಲ್ಲೆಲ್ಲಿ ಹೆಚ್ಚು ಸಂಚಾರ ದಟ್ಟಣೆ ಇದೆ ಎಂಬುದರ ಬಗ್ಗೆ ಅಧ್ಯಯನ ಮಾಡಿ ಸುಗಮ ಸಂಚಾರಕ್ಕೆ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದರು.

ಟ್ರಾಫಿಕ್ ಮ್ಯಾನೇಜ್‍ಮೆಂಟ್ ವ್ಯವಸ್ಥೆಯಲ್ಲಿ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಸಂಚಾರ ದಟ್ಟಣೆ ನಿಯಂತ್ರಿಸಲು ಪ್ರಯತ್ನಿಸುತ್ತೇವೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಯಾವ ರೀತಿ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ಚರ್ಚಿಸಿ ತೀರ್ಮಾನಿಸುವುದಾಗಿ ತಿಳಿಸಿದರು.

ರಿಷಿ ಸುನಕ್‍ ಮತ್ತು ಮೋದಿ ಮೊದಲ ಭೇಟಿ

ಒಟ್ಟಾರೆ ನಗರದಲ್ಲಿ ವಾಹನ ಸವಾರರಿಗೆ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.

ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ, ಅವುಗಳಿಂದ ಆಗುವ ಅಪಾಯಗಳ ಬಗ್ಗೆ ಬಿಬಿಎಂಪಿ ಗಮನಕ್ಕೆ ತಂದು ರಸ್ತೆ ಗುಂಡಿಗಳನ್ನು ಮುಚ್ಚಿಸುವ ಕಾರ್ಯ ಸಹ ಮಾಡಲಾಗುತ್ತದೆ ಎಂದು ಸಲೀಂ ಅವರು ತಿಳಿಸಿದರು.

ಕಾಂಗ್ರೆಸ್‍ನ ಪ್ರಭಾವಿ ನಾಯಕರ ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ ಬಿಜೆಪಿ

Articles You Might Like

Share This Article