ಹುಚ್ಚುನಾಯಿ ಕಡಿದು 35 ಮಂದಿ ಗಾಯ

Social Share

ಮೈಸೂರು,ಮಾ.3- ಹುಚ್ಚು ನಾಯಿ ಕಡಿದು 35ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ನಡೆದಿದೆ. ಶಾಲಾ ಮಕ್ಕಳು ಸೇರಿದಂತೆ 35ಕ್ಕೂ ಹೆಚ್ಚು ಜನರಿಗೆ ಹುಚ್ಚು ನಾಯಿ ಕಡಿದು ಗಾಯ ಮಾಡಿದೆ. ಗಾಯಗೊಂಡವರಿಗೆ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶಾಲಾ ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ನೀಡಲಾಗಿದೆ.  ನಾಯಿಗಳ ಉಪಟಳದಿಂದ ಸಾರ್ವಜನಿಕರು ಬಹಳ ತೊಂದರೆಗೆ ಒಳಗಾಗಿದ್ದಾರೆ. ಘಟನೆ ಬೆನ್ನಲ್ಲೇ ನಾಯಿಗಳ ಹಾವಳಿ ತಡೆಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Articles You Might Like

Share This Article