ಕಲಬುರಗಿ,ಮಾ.6-ಯಾವುದೇ ಕ್ಷಣದಲ್ಲೂ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ತನಿಖಾ ತಂಡ ಬಂಧಿಸಬಹುದೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಜೇವರ್ಗಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಿರುವ ಮಾಹಿತಿಯಂತೆ ನಾಳೆಯೊಳಗೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಬಹುದು. ಕಾನೂನಿಗೆ ಪ್ರತಿಯೊಬ್ಬರು ತಲೆಬಾಗುವುದು ಅನಿವಾರ್ಯ ಎಂದು ಸೂಚ್ಯವಾಗಿ ಹೇಳಿದರು.
ಈ ಪ್ರಕರಣದಲ್ಲಿ ನಮ್ಮ ಪಕ್ಷ ಯಾರನ್ನೂ ಕೂಡ ರಕ್ಷಣೆ ಮಾಡುವುದಿಲ್ಲ. ಕಾನೂನು ಪ್ರಕಾರ ಏನು ಶಿಕ್ಷೆಯಾಗಬೇಕೋ ಅದು ಆಗಲಿದೆ. ಲೋಕಾಯುಕ್ತ ವಿಷಯದಲ್ಲಿ ಯಾರೊಬ್ಬರು ಹಸ್ತಕ್ಷೇಪ ಮಾಡುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ನಮ್ಮ ಪಕ್ಷದ ನಿಲುವು ಇದೇ ಆಗಿದೆ ಎಂದರು.
ಉಮೇಶ್ ಪಾಲ್ ಹತ್ಯೆಗೈದ ಮತ್ತೊಬ್ಬ ಆರೋಪಿಯ ಎನ್‍ಕೌಂಟರ್
ಲೋಕಾಯುಕ್ತ ಸಂಸ್ಥೆಗೆ ಬೀಗ ಹಾಕಿದ ಕಾಂಗ್ರೆಸ್ ನಾಯಕರು ಈಗ ರೋಷವೇಷವಾಗಿ ಮಾತನಾಡುತ್ತಿರುವುದು ಹಾಸ್ಯಾಸ್ಪದವಾಗಿದೆ. ನಮ್ಮ ಸರ್ಕಾರ ಸಂಸ್ಥೆಗೆ ಶಕ್ತಿ ತುಂಬುವ ಕೆಲಸ ಮಾಡಿದೆ. ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯನ್ನು ಉಳಿಸಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಏನೇ ತಿಪ್ಪರಲಾಗ ಹಾಕಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಸ್ವಂತಬಲದ ಮೇಲೆ ಅಧಿಕಾರ ಹಿಡಿಯುವುದು ಸೂರ್ಯ-ಚಂದ್ರರಷ್ಟೇ ಸತ್ಯ. ಪ್ರತಿಪಕ್ಷಗಳ ಆರೋಪಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.
madal virupakshappa, mla, arrested, lokayukta, bs yediyurappa,