Wednesday, May 1, 2024
Homeರಾಜ್ಯಖಾಲಿ ಶಿಕ್ಷಕರ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ : ಮಧುಬಂಗಾರಪ್ಪ

ಖಾಲಿ ಶಿಕ್ಷಕರ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ : ಮಧುಬಂಗಾರಪ್ಪ

ಬೆಂಗಳೂರು,ಫೆ.19- ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಎಷ್ಟು ಸಾಧ್ಯವೋ ಅಷ್ಟು ಬೇಗ ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯರಾದ ಮರಿತಿಬ್ಬೇಗೌಡ ಹಾಗೂ ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಶಾಲೆ ಜೊತೆಗೆ ಅನುದಾನಿತ ಶಾಲೆಯನ್ನೂ ಪರಿಗಣಿಸುತ್ತೇವೆ. ಹೈಕೋರ್ಟ್‍ನಲ್ಲಿ ತಡೆಯಾಜ್ಞೆ ಇರುವುದರಿಂದ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿದೆ ಎಂಬುದನ್ನು ಒಪ್ಪಿಕೊಂಡರು.

ಕಳೆದ ಎಂಟು ವರ್ಷಗಳಿಂದ ನೇಮಕಾತಿಯನ್ನು ಮಾಡಿಕೊಂಡಿಲ್ಲ. ತಡೆಯಾಜ್ಞೆ ತೆರವುಗೊಳಿಸುವ ಸಂಬಂಧ, ಅಡ್ವೋಕೇಟ್ ಜನರಲ್‍ಜೊತೆ ಚರ್ಚಿಸಲಾಗಿದೆ. ಕಳೆದ ಎಂಟು ತಿಂಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಶೀಘ್ರವೇ ನೇಮಕಾತಿ ಮಾಡುತ್ತೇವೆ, ಕೋರ್ಟ್ ಕೇಸ್ ಬಗ್ಗೆ ಕೂಡ ಹೆಚ್ಚು ಗಮನ ಕೊಡುತ್ತೇವೆ ಎಂದು ಹೇಳೀದರು.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊಡುವಂತೆ ವಿಜಯೇಂದ್ರಗೆ ವರಿಷ್ಠರ ಸೂಚನೆ

ಅನುದಾನಿತ ಶಾಲೆಗಳಿಗೆ ಸಿಬ್ಬಂದಿಗಳನ್ನು ನೇಮಕಾತಿ ಮಾಡುವ ಸಂಬಂಧ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅವರಿಂದ ಅನುಮತಿ ಪಡೆಯುವುದಷ್ಟೇ ಬಾಕಿ ಇದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆ ಎರಡಕ್ಕೂ ಒಂದೇ ಮಾನದಂಡ ಎಂದು ಸ್ಪಷ್ಟಪಡಿಸಿದರು. ಇದಕ್ಕೂ ಮುನ್ನ ಸಂಕನೂರ ಪ್ರಶ್ನೆ ಕೇಳಿ, ಅನುದಾನಿತ ಶಾಲೆಗಳಲ್ಲಿ ನಿವೃತ್ತಿ, ರಾಜೀನಾಮೆ ಹಾಗೂ ಇನ್ನಿತರೆ ಕಾರಣದಿಂದ 2016ರಿಂದ ಇಲ್ಲಿಯವರೆಗೂ ಎಷ್ಟು ಖಾಲಿ ಹುದ್ದೆ ಇದೆ. ಹುದ್ದೆ ಭರ್ತಿಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊರತೆಯಾಗಿದೆ ಎಂದು ಆಕ್ಷೇಪಿಸಿದರು.

ಅನುದಾನಿತ ಶಾಲೆಯಲ್ಲಿ ಸಂಪನ್ಮೂಲದ ಕೊರತೆ ಇರುವುದರಿಂದ ವೇತನದ ಬಗ್ಗೆಯೂ ಗಮನಹರಿಸುತ್ತೇವೆ. ಸಂಜೀವಿನಿ ಮೂಲಕ ವಿಮೆ ಮಾಡುವ ಬಗ್ಗೆಯೂ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಎಂಟು ವರ್ಷದಿಂದ ನಡೆಯುತ್ತಲೇ ಇದೆ. ಸಮರ್ಪಕ ಉತ್ತರ ಬರುತ್ತಿಲ್ಲ. ಟೀಚರ್ ಇಲ್ಲದೆ ವಿದ್ಯಾರ್ಥಿಗಳು ಕಲಿಕೆಗೆ ಹಿನ್ನಡೆಯಾಗಿದೆ. ಏಡೆಡ್ ಶಾಲೆಗಳ ಶಿಕ್ಷಕರಿಗೆ ವಿಮಾ ಯೋಜನೆ ನೀಡಬೇಕು. ಬೇಕಿದ್ದರೆ ವೇತನದಲ್ಲೇ ಶೇ.50ರಷ್ಟು ಹಿಡಿಯಿರಿ ಎಂದು ಸದಸ್ಯ ಸಂಕನೂರು ಸಲಹೆ ಮಾಡಿದರು.

ರಾಜಕೀಯ ಮಾತುಕತೆ ಆರಂಭಿಸಿದ ಪವನ್‍ಕಲ್ಯಾಣ್

ಹಣಕಾಸು ಇಲಾಖೆಯಿಂದ ಮಂಜೂರಾದ ಹುದೆಗಳನ್ನೂ ಭರ್ತಿ ಮಾಡಿಲ್ಲ. ಇನ್ನು ಎಷ್ಟು ದಿನ ಕಾಯಬೇಕು? ಹೈಕೋರ್ಟ್ ಹೇಳಿದ ಮೇಲೂ ನೇಮಕಾತಿ ಮಾಡಿಲ್ಲ. ಹೈಕೋರ್ಟ್ ಆದೇಶಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ನಾನು ಬದ್ದನಿದ್ದೇನೆ. ಶೀಘ್ರವೇ ಭರ್ತಿ ಮಾಡುವ ಕೆಲಸ ಆಗಲಿದೆ. ಮಕ್ಕಳಿಗೆ ಶಿಕ್ಷಣ ಕೊಡುವ ಕೆಲಸಕ್ಕೆ ಬದ್ದ. ಕೋರ್ಟ್ ಆದೇಶದ ಮೂಲಕವೇ ನೇಮಕವಾಗಬೇಕು. ಅದಕ್ಕೆ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ವೇತನದಲ್ಲಿ ಕಡಿತ ಮಾಡಿ ಶಿಕ್ಷಕರಿಗೆ ವಿಮೆ ಯೋಜನೆ ಜಾರಿಗೊಳಿಸುವ ಪ್ರಕ್ರಿಯೆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

RELATED ARTICLES

Latest News