Thursday, March 13, 2025
Homeರಾಜ್ಯಪಬ್ಲಿಕ್ ಶಾಲೆಗಳನ್ನು ವಿಸ್ತರಿಸುವ ಕುರಿತು ADB ಬ್ಯಾಂಕ್ ಅಧಿಕಾರಿಗಳ ಜೊತೆ ಸಚಿವ ಮಧು ಬಂಗಾರಪ್ಪ ಸಭೆ

ಪಬ್ಲಿಕ್ ಶಾಲೆಗಳನ್ನು ವಿಸ್ತರಿಸುವ ಕುರಿತು ADB ಬ್ಯಾಂಕ್ ಅಧಿಕಾರಿಗಳ ಜೊತೆ ಸಚಿವ ಮಧು ಬಂಗಾರಪ್ಪ ಸಭೆ

Madhu Bangarappa meets with bank officials on expansion of public schools

ಬೆಂಗಳೂರು, ಮಾ.13– ರಾಜ್ಯದಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಏಷ್ಯಾ ಅಭಿವೃದ್ಧಿ ಬ್ಯಾಂಕಿನೊಂದಿಗೆ ವಿಸ್ತರಿಸುವ ಕುರಿತಂತೆ ಶಾಲಾ ಶಿಕ್ಷಣ ಹಾಗೂ ಪ್ರಾಥಮಿಕ ಸಚಿವ ಮಧು ಬಂಗಾರಪ್ಪ ವಿಧಾನಸೌಧದಲ್ಲಿಂದು ಬ್ಯಾಂಕಿನ ಅಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗಿದೆ. ಈ ಶಾಲೆಗಳಿಂದಾಗಿ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ವಿಕಾಸ ಹಾಗೂ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶವಿದೆ. ಮಕ್ಕಳು ಕಲಿಕೆಯಲ್ಲಿ ಹಿಂದುಳಿಯದಂತೆ ಎಚ್ಚರ ವಹಿಸುವಂತೆ ಸಮಗ್ರವಾಗಿ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ಸಚಿವರು ಸಭೆಯಲ್ಲಿ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ತ್ರಿಲೋಕ್ ಚಂದ್ರ, ರಾಜ್ಯ ಯೋಜನಾ ನಿರ್ದೇಶಕ ಎಂ.ಕುರ್ಮರಾವ್, ಧಾರವಾಡ ವಿಭಾಗದ ಅಪರ ಆಯುಕ್ತರಾದ ಜಯಶ್ರೀ ಶಿಂತ್ರಿ ಹಾಗೂ ಕಲಬುರಗಿ ವಿಭಾಗದ ಅಪರ ಆಯುಕ್ತರಾದ ಡಾ.ಆಕಾಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Latest News