ಭೋಪಾಲ್,ಅ.2- ಮಧ್ಯಪ್ರದೇಶದ ಅಶೋಕ್ ನಗರ ಜಿಲ್ಲೆಯಲ್ಲಿ ನಾಲ್ವರು ವ್ಯಕ್ತಿಗಳು 35 ವರ್ಷದ ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಮಹಿಳೆಯೊಬ್ಬರು ಕೃಷಿ ಕ್ಷೇತ್ರದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಉಪವಿಭಾಗಾಧಿಕಾರಿ ವಿವೇಕ್ ಶರ್ಮಾ ಅವರು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಮಹಿಳೆಯನ್ನು ಶಡೋರಾದ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅಶೋಕನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.
ತನಗೆ ಪರಿಚಯವಿದ್ದ ನಾಲ್ವರು ತನ್ನನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಆರೋಪಿಗಳು ಆಕೆಯನ್ನು ಕೃಷಿ ಜಮೀನಿನಲ್ಲಿ ಎಸೆದಿದ್ದಾರೆ ಎಂದು ಸಂತ್ರಸ್ತೆಯನ್ನು ಉಲ್ಲೇಖಿಸಿ ಅಧಿಕಾರಿ ತಿಳಿಸಿದ್ದಾರೆ.
ಬಿಟ್‍ಕಾಯಿನ್ ವ್ಯವಹಾರ ನಡೆಸಲು ಹೋಗಿ 77 ಲಕ್ಷ ಕಳೆದುಕೊಂಡ
ಈ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬ ಕೊಲೆ ಪ್ರಕರಣದಲ್ಲಿ ಸಾಕ್ಷಿಯಾಗಿದ್ದು, ಇದರಲ್ಲಿ ಸಂತ್ರಸ್ತೆಯ ಪತಿ ಆರೋಪಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಮಹಿಳೆಯ ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಅ„ಕಾರಿ ತಿಳಿಸಿದ್ದಾರೆ.
ಪೊಲೀಸರು ಸಾಮೂಹಿಕ ಅತ್ಯಾಚಾರ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆಗಾಗಿ ಸಂಬಂಧಿತ ಭಾರತೀಯ ದಂಡ ಸಂಹಿತೆಯ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.