ಮೋದಿ ವಿರುದ್ಧ ಹೇಳಿಕೆ : ಕಾಂಗ್ರೆಸ್‍ನ ರಾಜಾ ಪಟೇರಿಯಾ ಬಂಧನ

Social Share

ದಮೋಹ್ (ಮಧ್ಯಪ್ರದೇಶ)ಡಿ.13- ಪ್ರಧಾನಿ ಮೋದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪವಾಯಿಯಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ಸಂವಿಧಾನವನ್ನು ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿರಿ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.
ವಿಶೇಷ ಪೊಲೀಸ್ ತಂಡ ಇಂದು ಬೆಳಿಗ್ಗೆ 5.30 ರ ಸುಮಾರಿಗೆ ದಾಮೋಹ್ ಜಿಲ್ಲೆಯ ಹಟಾ ಪಟ್ಟಣದಲ್ಲಿರುವ ಪಟೇರಿಯಾ ಅವರ ನಿವಾಸಕ್ಕೆ ಹೋಗಿ ಅವರನ್ನು ಬಂಧಿಸಿದ್ದಾರೆ.

ಗೋಲ್ಡನ್ ಗ್ಲೋಬ್ ಪ್ರಶಸ್ತಿ ಬಾಗಿಲಲ್ಲಿ ಆರ್‌ಆರ್‌ಆರ್‌

ನಂತರ ಬೆಳಗ್ಗೆ 7 ಗಂಟೆ ಸುಮಾರಿಗೆ ಅವರನ್ನು ಪವಾಯ್ ನಗರಕ್ಕೆ ಕರೆದುಕೊಂಡು ಹೋಗಲಾಯಿತು ಎಂದು ಹಟಾ ಉಪವಿಭಾಗದ ಪೊಲೀಸ್ ಅಧಿಕಾರಿ ವೀರೇಂದ್ರ ಬಹದ್ದೂರ್ ಸಿಂಗ್ ತಿಳಿಸಿದರು.

ಮಾಜಿ ಸಚಿವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಎಚ್ಚೆತ್ತ ಪೊಲೀಸರು ಪ್ರಕರಣ ದಾಖಲಿಸಿ ನಂತರ ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿ ನ್ಯಾಯಾೀಧಿಶರ ಮುಂದೆ ಹಾಜರು ಪಡಿಸಲಾಗುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಚರ್ಮಗಂಟು ರೋಗ : ಮೃತ ಜಾನುವಾರುಗಳ ಮಾಲೀಕರಿಗೆ ಪರಿಹಾರ ನೀಡಲು 30 ಕೋಟಿ ಬಿಡುಗಡೆ

ರಾಜಾ ಪಟೇರಿಯಾ ಹೇಳಿಕೆಗೂ ನಮಗೂ ಸಂಬಂಧವಿಲ್ಲ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

#MadhyaPradesh, #CongressLeader, #RajaPateria, #arrested,
#remark,

Articles You Might Like

Share This Article