ಭೋಪಾಲ್,ಜ.23- ಇದೇ ವರ್ಷ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ತಯಾರಿಸಿದೆ.
ಪ್ರಿಯದರ್ಶಿನಿ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಮಾಡಿದೆ, ಪಕ್ಷದ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಿಳೆಗಾಗಿ ಪ್ರತ್ಯೇಕ ಪ್ರಣಾಳಿಕೆ ರೂಪಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪ್ರಿಯದರ್ಶಿನಿ ಜೊತೆಗೆ ಸಾಮಾನ್ಯ ಪ್ರಣಾಳಿಕೆಯನ್ನು ಪ್ರಕಟಿಸಲಾಗುತ್ತದೆ. ಸಮಾಜದ ವಿವಿಧ ಭಾಗಗಳಿಗೆ ಸಂಬಂಸಿದ ಬೇಡಿಕೆಗಳ ಮಾಹಿತಿಯನ್ನು ಸಂಗ್ರಹಿಸಲು ಹತ್ತು ಉಪ ಸಮಿತಿಗಳನ್ನು ರಚಿಸಲಾಗಿದೆ.
ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ : ಸಿಎಂ ಬೊಮ್ಮಾಯಿ ವಾಗ್ದಾಳಿ
ಒಂದು ತಿಂಗಳ ನಂತರ ಉಪ ಸಮಿತಿಗಳ ಸಭೆ ನಡೆಸಲಾಗುವುದು ಎಂದು ಪ್ರಣಾಳಿಕಾ ಸಮಿತಿ ಅಧ್ಯಕ್ಷ ರಾಜೇಂದ್ರ ಸಿಂಗ್ ಹೇಳಿದರು. ರಾಜ್ಯದ ಪ್ರತಿ ಜಿಲ್ಲೆಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಈ ಮೊದಲು ಕಾಂಗ್ರೆಸ್ ಹೇಳಿತ್ತು.
Madhya Pradesh, Congress, Release, Separate, Manifesto, Woman,