ಕಟ್ಟಿ, ಏ. 19: ಮಕ್ಕಳಿಗೆ ಪಾಠ ಮಾಡಪ್ಪ ಅಂದರೆ ವಿದ್ಯಾರ್ಥಿಗಳಿಗೆ ಎಣ್ಣೆ ನೀಡಲು ಮುಂದಾದ ಶಿಕ್ಷಕನಿಗೆ ಗೇಟ್ ಪಾಸ್ ನೀಡಲಾಗಿದೆ. ಶಿಕ್ಷಕ ವಿದ್ಯಾರ್ಥಿಗಳಿಗೆ ಮದ್ಯ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಕಟ್ಟಿ ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬರ್ವಾರಾ ಬ್ಲಾಕ್‌ನ ಖಿರ್ಹಾನಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಲಾಲ್ ನವೀನ್ ಪ್ರತಾಪ್ ಸಿಂಗ್ ವಿದ್ಯಾರ್ಥಿಗಳಿಗೆ ಮದ್ಯ ನೀಡುತ್ತಿದ್ದ ವೀಡಿಯೊ ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತ್ತು.
ವೀಡಿಯೊವನ್ನು ಗಮನಿಸಿದ ಜಿಲ್ಲಾಧಿಕಾರಿ ದಿಲೀಪ್ ಕುಮಾರ್ ಯಾದವ್ ಅವರು ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಶಿಕ್ಷಣ ಅಧಿಕಾರಿ ಒಪಿ ಸಿಂಗ್ ಅವರಿಗೆ ನಿರ್ದೇಶನ ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವೀಡಿಯೊವನ್ನು ವಿವಿಧ ಬ್ಲಾಕ್‌ಗಳ ಅಧಿಕಾರಿಗಳಿಗೆ ಪ್ರಸಾರ ಮಾಡಲಾಗಿದೆ ಮತ್ತು ಶಿಕ್ಷಕನನ್ನು ನಂತರ ಲಾಲ್ ನವೀನ್ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.
ದುರ್ನಡತೆ, ಮಕ್ಕಳನ್ನು ಮದ್ಯಪಾನ ಮಾಡಲು ಪ್ರೋತ್ಸಾಹಿಸುವುದು ಮತ್ತು ಶಿಕ್ಷಕರ ಘನತೆಗೆ ಧಕ್ಕೆ ತಂದ ಆರೋಪದ ಮೇಲೆ ಸಿಂಗ್ ಅವರನ್ನು ಮಧ್ಯಪ್ರದೇಶ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳ ಅಡಿಯಲ್ಲಿ ತಕ್ಷಣ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವೀಡಿಯೊದಲ್ಲಿ ವ್ಯಕ್ತಿಯೊಬ್ಬ ಕೋಣೆಯಲ್ಲಿ ಕಪ್ ಗಳಲ್ಲಿ ಚಿಕ್ಕ ಹುಡುಗರಿಗೆ ಪಾನೀಯವನ್ನು ನೀಡುತ್ತಿರುವುದನ್ನು ತೋರಿಸುತ್ತದೆ, ಮತ್ತು ಅವನು ಅವರಲ್ಲಿ ಒಬ್ಬರಿಗೆ ಎಣ್ಣೆ ಹೊಡೆಯುವುದರಲ್ಲಿ ಏನು ತಪ್ಪಿಲ್ಲ ಎಂದು ಹೇಳುವುದು ವಿಡಿಯೋದಲ್ಲಿ ವೈರಲ್ ಆಗಿತ್ತು.