ಮಡಿಕೇರಿ,ಅ.9-ಇಲ್ಲಿನ ವಸತಿ ಶಾಲೆಯಲ್ಲಿ ಸಂಭವಿಸಿದ ಅಗ್ನಿಅವಘಡದಲ್ಲಿ 2ನೇ ತರಗತಿ ವಿದ್ಯಾರ್ಥಿ ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ.
ತಾಲೂಕಿನ ಕಾಟಗೇರಿ ಗ್ರಾಮದಲ್ಲಿರುವ ಹರ್ ಮಂದಿರ್ ವಸತಿ ಶಾಲೆಯಲ್ಲಿ ಪುಷ್ಪಕ್ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ರಾತ್ರಿ ಎಂದಿನಂತೆ ಊಟ ಮಾಡಿ ವಸತಿ ಶಾಲೆಯ ಮಕ್ಕಳು ಮಲಗಿದ್ದಾರೆ. ಇಂದು ಮುಂಜಾನೆ 4.30ರ ವೇಳೆಯಲ್ಲಿ ಯಮನಂತೆ ಬೆಂಕಿ ಆವರಿಸಿಕೊಂಡಿದೆ. ದೊಡ್ಡ ಕೊಣೆಯಲ್ಲಿ ಸಾಲು ಸಾಲು ಬೆಡ್‌ನಲ್ಲಿ ಸುಮಾರು 29 ಮಕ್ಕಳು ಮಲಗಿದ್ದರು.
ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಎಚ್ಚೆತ್ತ ಶಾಲೆಯ ಸಿಬ್ಬಂಧಿ ಮಕ್ಕಳನ್ನುಎಬ್ಬಿಸಿ ಹೊರಗೆ ಕರೆ ತಂದು ಅಗ್ನಿ ಶಾಮಕ ದಳಕ್ಕೆ ತಿಳಿಸಿದ್ದಾರೆ.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾದರೂ ಈ ವೇಳೆ ಪುಷ್ಪಕ್ ಭಾರಿ ಹೊಗೆಯಿಂದ ಹೊರಬರಲಾಗದೆ ಮೃತಪಟ್ಟಿದ್ದಾನೆ .
ಅಗ್ನಿ ಅವಘಡಕ್ಕೆ ಸದ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಸರ್ಕಲ್ ಇನ್‌್ಸಪೆಕ್ಟರ್ ಚಂದ್ರಶೇಖರ್, ಆಗ್ನಿ ಶಾಮಕ ಅಧಿಕಾರಿ ನಾಗರಾಜ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ವಿಷಯ ತಿಳಿಯುತ್ತಿದಂತೆ ಮಕ್ಕಳ ಪೋಷಕರು ಸಹ ಶಾಲೆಯತ್ತ ದೌಡಾಯಿಸಿದ್ದಾರೆ. ತಮ ಮಗ ಪುಷ್ಪಕ್‌ನನ್ನು ಕಳೆದುಕೊಂಡ ಪೋಷಕರು ಹಾಗೂ ಸಂಬಂಧಿಕರ ರೋಧನ ಹೇಳತೀರದಾಗಿತ್ತು.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.