ಚೆನ್ನೈ,ಡಿ.19- ಅಕ್ರಮ ಆಸ್ತಿ ಹಾಗೂ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರನ್ನು ದೋಷಿ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಶೇಷವೆಂದರೆ ಕಳೆದ ಜೂ.18ರಂದು ವೆಲ್ಲೂರಿನ ಪ್ರಧಾನ ಸೆಷನ್ಸ್ ನ್ಯಾಯಾಲಯವು ಸಚಿವ ಪೊನ್ಮುಡಿ ಮತ್ತು ಅವರ ಪತ್ನಿಯ ಅಕ್ರಮ ಆಸ್ತಿ ಪ್ರಕರಣ ವನ್ನು ಖುಲಾಸೆಗೊಳಿಸಿತ್ತು.
ಇದೀಗ ಮದ್ರಾಸ್ ಹೈಕೋರ್ಟ್‍ನ ವಿಚಾರಣಾ ನ್ಯಾಯಾಲಯ ವೆಲ್ಲೂರು ನ್ಯಾಯಾಲಯ ನೀಡಿದ್ದ ತೀರ್ಪು ಮತ್ತು ಖುಲಾಸೆಯನ್ನು ರದ್ದುಗೊಳಿಸಿ ದೋಷಿ ಎಂದು ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಒಂದು ವಾರದ ನಂತರ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದ್ದು, ಪೊನ್ನುಡಿಗೆ ಎರಡು ವರ್ಷಕ್ಕೂ ಹೆಚ್ಚು ಕಾಲ ಶಿಕ್ಷೆಯಾದರೆ ಅವರ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ.
ವೆಲ್ಲೂರಿನ ಪ್ರಧಾನ ಜಿಲ್ಲಾ ನ್ಯಾಯಾೀಧಿಶೆ ಎನ್.ವಸಂತಲೀಲಾ ಅವರು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಮತ್ತು ಹಿರಿಯ ಡಿಎಂಕೆ ನಾಯಕ ಕೆ.ಪೊನ್ಮುಡಿ ಮತ್ತು ಅವರ ಪತ್ನಿಯನ್ನು ಜಾಗೃತದಳ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ ದಾಖಲಿಸಿದ ಅಕ್ರಮ ಆಸ್ತಿ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದರು.
ಗ್ಯಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆ ಪ್ರಶ್ನಿಸಿ ಮುಸ್ಲಿಮರು 5 ಅರ್ಜಿಗಳು ವಜಾ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೂನ್‍ನಲ್ಲಿ ವೆಲ್ಲೂರಿನ ನ್ಯಾಯಾಲಯವು ಖುಲಾಸೆಗೊಳಿಸಿದ ನಂತರ ಅವರ ಖುಲಾಸೆಯ ಪರಿಷ್ಕರಣೆಯನ್ನು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಳ್ಳಲು ಮದ್ರಾಸ್ ಹೈಕೋರ್ಟ್ ಆಗಸ್ಟ್‍ನಲ್ಲಿ ನಿರ್ಧರಿಸಿತ್ತು.1996-2001ರ ಅವಯಲ್ಲಿ ಆಗಿನ ಎಐಎಡಿಎಂಕೆ ಸರ್ಕಾರ ಅಧಿಕಾರದಲ್ಲಿದ್ದಾಗ 2002ರಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿ ವಿರುದ್ಧ ಜಾಗೃತದಳ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ (ಡಿವಿಎಸಿ) ಪ್ರಕರಣ ದಾಖಲಿಸಲಾಗಿತ್ತು.
ಇದರಲ್ಲಿ ಇಬ್ಬರ ಆದಾಯ 1.4 ಕೋಟಿ ರೂ. ಆ ಸಮಯದಲ್ಲಿ ಅವರ ಆದಾಯಕ್ಕಿಂತ ಹೆಚ್ಚಿನ ಗಳಿಕೆಯಾಗಿದೆ ಎಂದು ಆರೋಪಿಸಲಾಗಿತ್ತು. ಪೊನ್ಮುಡಿ ಅವರು 1996-2001ರ ಅವಧಿಯಲ್ಲಿ ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಅವಧಿಯಲ್ಲಿ ಅಕ್ರಮ ಸಂಪತ್ತು ಸಂಗ್ರಹಿಸಿದ್ದಾರೆ ಎಂದು ಡಿವಿಎಸಿ ಪ್ರತಿಪಾದಿಸಿದೆ.