ಮಂಗಳೂರು, ಫೆ.8- ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಮದರಸಾ ಶಿಕ್ಷಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಕುಂಡಡ್ಕದಲ್ಲಿ ಬಂಸಲಾಗಿದೆ. ಕುಂಡಡ್ಕದ ಮದ್ರಸಾದ ಶಿಕ್ಷಕ ಉಸ್ತಾದ್ ಸಿರಾಜುದ್ದೀನ್ ಮದನಿಯನ್ನು ಬಂಧಿಸಲಾಗಿದೆ. ಮದ್ರಸಾದಲ್ಲಿ ಕಲಿಯುತ್ತಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಮದನಿ ಮೇಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇಬ್ಬರು ಬಾಲಕಿಯರ ತಾಯಂದಿರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಪುತ್ತೂರಿನ ಮಹಿಳಾ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
