ಥಾಣೆ, ಜ.29-ಕರ್ನಾಟಕದ ಬೆಂಗಳೂರಿನ ಮದರಸಾದಲ್ಲಿ ಓದುತ್ತಿರುವ 10 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಪೊಲೀಸರು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬಾಲಕನ ಪೋಷಕರು ಥಾಣೆ ನಗರದ ಶಿಲ್-ಫಾಟಾ ಪ್ರದೇಶದ ನಿವಾಸಿಗಳಾಗಿದ್ದು, ಥಾಣೆ ಪೊಲೀಸರನ್ನು ಸಂಪರ್ಕಿಸಿ ಘಟನೆ ಕುರಿತು ಮಾಹಿತಿ ನೀಡದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಗಸ್ಟ್ 2024 ಮತ್ತು ಜನವರಿ 2025 ರ ನಡುವೆ ಬೆಂಗಳೂರಿನ ಮದರಸಾದಲ್ಲಿ ಅಧ್ಯಯನ ಮಾಡುತ್ತಿದ್ದು.22 ವರ್ಷದ ಆರೋಪಿ ಶೕಕ್ಷಕ ವಸತಿ ನಿಲಯದ ಅತಿಥಿ ಕೋಣೆಗೆ ಕರೆಸಿಕೊಂಡುಹೋಗಿ ಬಾಲಕನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಶಿಲ್-ದೈಘರ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದರೆ ನಿನ್ನ ಮತ್ತು ಕುಟುಂಬವನ್ನು ಕೊಲ್ಲುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ ಎಂದುತಿಳಿಸಿದ್ದಾರೆ.ಸಹಿಸಲಾಗದೆ ನಂತರ ಬಾಲಕ ತನ್ನ ಪೋಷಕರಿಗೆ ತಿಳಿಸಿದ್ದಾನೆ.ಬಾಲಕನ ತಾಯಿಯ ದೂರಿನ ಆಧಾರದ ಮೇಲೆ, ಪೊಲೀಸರುಆರೋಪಿಯ ವಿರುದ್ಧ ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಪೋಕ್ಸೊಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದರು.ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಆರೋಪಿ ಬಂಧನ ಕುರಿತು ನಮ ಪೊಲೀಸರು ಬಂಗಳೂರಿಗೆ ತೆರಳಿದ್ದಾರೆ ಎಂದು ತಿಳಿಸಿದ್ದಾರೆ.