Monday, November 3, 2025
Homeರಾಷ್ಟ್ರೀಯ | Nationalಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ಅಮಿತ್ ಶಾ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ಅಮಿತ್ ಶಾ

Maha Kumbh: Amit Shah takes dip in Sangam

ಮಹಾಕುಂಭ ನಗರ, ಜ. 27 (ಪಿಟಿಐ) ಕೇಂದ್ರ ಗಹ ಸಚಿವ ಅಮಿತ್‌ ಶಾ ಅವರು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಅಮಿತ್​ ಶಾಗೆ ಉತ್ತರಪ್ರದೇಶ್​ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್​ ಸಾತ್​ ನೀಡಿದ್ದಾರೆ.

ಮಹಾಕುಂಭ ಮೇಳ 2025 ರಲ್ಲಿ ಭಾಗವಹಿಸಲು ಬೆಳಗ್ಗೆ 11.30ರ ಸುಮಾರಿಗೆ ಪ್ರಯಾಗ್‌ರಾಜ್‌ಗೆ ತಲುಪಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಮತ್ತು ಬ್ರಜೇಶ್​ ಪಾಠಕ್​ ಸ್ವಾಗತಿಸಿದರು. ಅಲ್ಲಿಂದ ಕುಂಭಮೇಳೆ ನಡೆಯುತ್ತಿರುವ ಸ್ಥಳಕ್ಕೆ ತೆರಳಿದರು. ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.

- Advertisement -

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಅವರು ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಿದರು. ಜನವರಿ 13ರಂದು ಆರಂಭವಾದ ಮಹಾಕುಂಭ ಫೆಬ್ರವರಿ 26ರವರೆಗೆ ನಡೆಯಲಿದೆ.ಫೆ. 5 ರಂದು ಪ್ರಧಾನಿ ನರೇಂದ್ರ ಮೋದಿ ಪವಿತ್ರ ಸ್ನಾನ ಮಾಡಲಿದ್ದಾರೆ.

- Advertisement -
RELATED ARTICLES

Latest News