ಮಹದಾಯಿ : ಕರ್ನಾಟಕದ ವಿರುದ್ಧ ನ್ಯಾಯಾಂಗ ನಿಂದನೆಯ ಗೋವಾ ಅರ್ಜಿ 4 ವಾರ ಮುಂದೂಡಿಕೆ

Supreme_Court_of_India_-_Retouchedನವದೆಹಲಿ, ಡಿ.8-ಮಹದಾಯಿ ನದಿ ನೀರಿನ ದಿಕ್ಕನ್ನು ತಿರುಗಿಸಿ ಕರ್ನಾಟಕ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಆರೋಪಿಸಿ ಗೋವಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಲ್ಕು ವಾರ ಮುಂದೂಡಿದೆ. ಮಹದಾಯಿ ನೀರು ವಿವಾದ ನ್ಯಾಯಮಂಡಳಿ ಮತ್ತು ಸುಪ್ರೀಂಕೋರ್ಟ್‍ಗೆ ಗೋವಾ 306 ಪುಟಗಳ ವಿವರ ಸಲ್ಲಿಸಿ ಕರ್ನಾಟಕ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಆರೋಪಿಸಿತ್ತು.

ಇಂದು ಸುಪ್ರೀಂಕೋರ್ಟ್‍ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಆತ್ಮರಾಮ್ ನಾಡಕರ್ಣಿ ಅವರನ್ನು ತನ್ನ ಪರ ವಾದಕ್ಕೆ ಒಪ್ಪಿಗೆ ಪಡೆಯಲು ನಾಲ್ಕು ಕಾಲಾವಕಾಶ ಬೇಕಾಗುತ್ತದೆ ಎಂದು ಗೋವಾ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ಕಾಲಾವಕಾಶ ನೀಡಿದ್ದು, ನಂತರ ಈ ಪ್ರಕರಣ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತ್ತು. ಕಳೆದ 30 ವರ್ಷಗಳಿಂದ ಕರ್ನಾಟಕ, ಗೋವಾ, ಮಹಾರಾಷ್ಟ್ರ ನಡುವೆ ಮಹದಾಯಿ ನದಿ ನೀರು ಹಂಚಿಕೆ ವಿವಾದ ಮುಂದುವರೆದಿದೆ.