ಲಖ್ನೋ,ಜ.25– ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದೆ.ಪ್ರಯಾಗ್ರಾಜ್ನ ಮುಖ್ಯರಸ್ತೆಯ ಸೆಕ್ಟರ್-2ರ ಬಳಿ ನಿಲ್ಲಿಸಿದ್ದ ಎರಡು ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಮುಂಜಾಗ್ರತೆ ಕ್ರಮವಾಗಿ ಸುತ್ತಮುತ್ತಲಿನ ವಾಹನಗಳನ್ನು ತೆರವುಗೊಳಿಸಲಾಯಿತು.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದ ಭಾನುವಾರ (ಜ.19) ಮಹಾ ಕುಂಭಮೇಳದ ಟೆಂಟ್ನಲ್ಲಿ ಅಡುಗೆ ತಯಾರಿಸುವ ವೇಳೆ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಸುಮಾರು 50 ಟೆಂಟ್ಗಳು ಬೆಂಕಿಗಾಹುತಿಯಾಗಿದ್ದವು.