ಮಹಾಲಕ್ಷ್ಮಿ ಲೇಔಟ್‍ನಲ್ಲಿ ನಮ್ಮ ಕ್ಲಿನಿಕ್‍ಗೆ ಚಾಲನೆ

Social Share

ಬೆಂಗಳೂರು,ಫೆ.7- ಬಡವರು, ಮಧ್ಯಮ ವರ್ಗದವರು ಕೂಲಿಕಾರ್ಮಿಕರು , ಶ್ರಮಿಕರು ಸೇರಿದಂತೆ ಮತ್ತಿತರರಿಗೆ ಅತಿ ಕಡಿಮೆ ವೆಚ್ಚದಲ್ಲಿ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕನಸಿನ ಯೋಜನೆ ನಮ್ಮ ಕ್ಲಿನಿಕ್‍ಗೆ ಇಂದು ಚಾಲನೆ ನೀಡಲಾಯಿತು.

ಅಬಕಾರಿ ಸಚಿವ ಹಾಗು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಗೋಪಾಲಯ್ಯ ಅವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ನಮ್ಮ ಕ್ಲಿನಿಕ್‍ಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಕಮಲಮ್ಮನಗುಂಡಿ ಆಟದ ಮೈದಾನ ಸಮೀಪ ಇರುವ ರಾಣಿ ಅಬ್ಬಕ್ಕ ಮೈದಾನದಲ್ಲಿ ಸಿಎಂ ಬೊಮ್ಮಾಯಿ, ಸಚಿವ ಡಾ.ಕೆ.ಸುಧಾಕರ್,
ಮುಖಂಡ ನೆ.ಲ.ನರೇಂದ್ರ ಬಾಬು ಮತ್ತಿತರರು ನಮ್ಮ ಕ್ಲಿನಿಕ್‍ಗೆ ಚಾಲನೆ ಕೊಟ್ಟರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಾರ್ಡ್ ನಂ. 43ರ ವ್ಯಾಪ್ತಿಯ ಬಿಎಚ್‍ಇಎಲ್ ಬಡಾವಣೆ ನವನಂದಿನಿ ಉದ್ಯಾನವನ, ಮಾರಪ್ಪನಹಳ್ಳಿ ವಾರ್ಡ್ 44ರ ಕೃಷ್ಣಾನಂದನಗರದಲ್ಲಿ ನಿರ್ಮಿಸಿರುವ ಕರ್ನಾಟಕ ಪಬ್ಲಿಕ್ ಶಾಲಾ ಕಟ್ಟಡ,

ಬಿಎಂಟಿಸಿ ಎಂಡಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಚಾಲಕ ಸಸ್ಪೆಂಡ್

ವೃಷಭಾವತಿ ನಗರ ವಾರ್ಡ್ 102ರ ಎನ್‍ಜಿಒಎಸ್ ಕಾಲೋನಿಯಲ್ಲಿ ನಿರ್ಮಿಸಿರುವ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಕಟ್ಟಡ, ಶಕ್ತಿಗಣಪತಿ ನಗರ ವಾರ್ಡ್ 77ರ ಬಿಬಿಎಂಪಿ ಪ್ರೌಢಶಾಲೆ ಹಾಗೂ ಕಾಲೇಜು ಕಟ್ಟಡ, ಲಕ್ಷ್ಮಿಪುರಂನ ಬಿಬಿಎಂಪಿ ರೆಫರಲ್ ಆಸ್ಪತ್ರೆ ಕಟ್ಟಡ ಹಾಗೂ ನಾಗಪುರ ವಾರ್ಡ್ 67ರ ಮಹಾಲಕ್ಷ್ಮಿಪುರಂ ಬಡಾವಣೆಯಲ್ಲಿ ನಿರ್ಮಾಣ ಮಾಡಿದ್ದ ರಾಣಿ ಅಬ್ಬಕ್ಕ ಆಟದ ಮೈದಾನವನ್ನು ಲೋಕಾರ್ಪಣೆಗೊಳಿಸಿದರು.

ಬೆಂಗಳೂರಿನಲ್ಲಿ ಇಂದಿನಿಂದ ನಮ್ಮ ಕ್ಲಿನಿಕ್‍ಗಳು ಪ್ರಾರಂಭವಾಗಲಿದೆ. ನಗರಪ್ರದೇಶ ವ್ಯಾಪ್ತಿಯಲ್ಲಿ 438 ನಮ್ಮ ಕ್ಲಿನಿಕ್‍ಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ಪ್ರತಿ 50,000 ಜನಸಂಖ್ಯೆಗೆ ಒಂದರಂತೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಹೆಚ್ಚುವರಿಯಾಗಿ 15ನೇ ಹಣಕಾಸು ಆಯೋಗದ ಅನುದಾನದಡಿ ರಾಜ್ಯಾದ್ಯಂತ ನಗರಪ್ರದೇಶಗಳಲ್ಲಿ 15 ರಿಂದ 20 ಸಾವಿರ ಜನಸಂಖ್ಯೆಗೆ ಒಂದರಂತೆ ನಮ್ಮ ಕ್ಲಿನಿಕ್‍ಗಳನ್ನು ತೆರೆಯಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಮತ್ತು ಉಳಿದ ಜಿಲ್ಲೆಗಳಲ್ಲಿ 195 ನಮ್ಮ ಕ್ಲಿನಿಕ್‍ಗಳನ್ನು ಆರಂಭಿಸಲಾಗುತ್ತಿದೆ.

ನಮ್ಮ ಕ್ಲಿನಿಕ್‍ಗಳಲ್ಲಿ ರೆಫರಲ್ ಸೇವೆಗಳನ್ನು ಒದಗಿಸುವ ಮುಖಾಂತರ ದ್ವಿತೀಯ ಮತ್ತು ತೃತೀಯ ಹಂತದ ಆಸ್ಪತ್ರೆಗಳಿಗೂ ಇವು ಸಂಪರ್ಕ ಕಲ್ಪಿಸುತ್ತಿವೆ. ಆರೋಗ್ಯ ಸೇವೆಗಳನ್ನು ಪಡೆಯಲು ತಗುಲುವ ವೆಚ್ಚ ಕಡಿಮೆ ಮಾಡಲು ಸಹಕಾರಿಯಾಗಲಿದೆ. ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರೀಕರಿಸಲಾಗುತ್ತಿದೆ.

ನಮ್ಮ ಕ್ಲಿನಿಕ್‍ಗಳಲ್ಲಿ ತಲಾ ಒಬ್ಬರು ವ್ಯೆದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಡಿ-ದರ್ಜೆ ನೌಕರರು ಇರಲಿದ್ದಾರೆ. ಒಟ್ಟು 12 ಆರೋಗ್ಯ ಸೇವೆಗಳ ಪ್ಯಾಕೇಜ್ ಇಲ್ಲಿ ಲಭ್ಯವಿದೆ.

ನಮ್ಮ ಕ್ಲಿನಿಕ್‍ಗಳು ಬೆಳಗ್ಗೆ 9 ಗಂಟೆಯಿಂದ ಸಂಜೆ 4.30ರವರೆಗೆ ಕಾರ್ಯಾನಿರ್ವಹಿಸುತ್ತಿವೆ. ಒಬ್ಬ ಡಾಕ್ಟರ್, ಒಬ್ಬ ನರ್ಸ್, ಒಬ್ಬ ಲ್ಯಾಬ್ ಟೆಕ್ನೀಷಿಯನ್ ಹಾಗೂ ಒಬ್ಬ ಡಿ ಗ್ರೂಪ್ ಸಿಬ್ಬಂದಿ ಮಾತ್ರ ಇಲ್ಲಿ ಕಾರ್ಯ ನಿರ್ವಹಿಸುತ್ತಾರೆ.

1,000 ಚದರ ಅಡಿ ವಿಸ್ತೀರ್ಣದಲ್ಲಿ ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ತಪಾಸಣೆ ಕೊಠಡಿ, ಚುಚ್ಚು ಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಯೋಗ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿ, ಆಡಳಿತ ಕಚೇರಿ, ಹೀಗೆ ಪ್ರತ್ಯೇಕ ಕೊಠಡಿಗಳಿವೆ. ಆಸ್ಪತ್ರೆ ಸಿಬ್ಬಂದಿ, ಮಹಿಳೆ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಜಾರಿಗೆ ಬರಲಿದೆ ಹೊಸ ಜಾಹೀರಾತು ನೀತಿ

ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಮತ್ತು ಶಿಶುವಿನ ಸಮಗ್ರ ಆರೋಗ್ಯ ರಕ್ಷಣೆ, ಬಾಲ್ಯ ಮತ್ತು ಹದಿಹರೆಯದವರ ಸಮಗ್ರ ಆರೋಗ್ಯ ಸೇವೆಗಳು, ಸಾರ್ವತ್ರಿಕ ಲಸಿಕಾಕರಣ ಸೇವೆಗಳು, ಕುಟುಂಬ ಕಲ್ಯಾಣ, ಗರ್ಭನಿರೋಧಕ ಸೇವೆಗಳು ಮತ್ತು ಇತರ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳು, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಖಾಯಿಲೆಗಳಿಗೆ ಹೊರ ರೋಗಿ ಸೇವೆ, ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆ, ಬಾಯಿ ಆರೋಗ್ಯ ಸೇವೆಗಳು ಲಭ್ಯವಾಗಲಿವೆ.

ನೇತ್ರ, ಕಿವಿ, ಮೂಗು , ಗಂಟಲು ಆರೋಗ್ಯ ಆರೈಕೆ ಸೇವೆಗಳ ಜೊತೆಗೆ ಮಾನಸಿಕ ಆರೋಗ್ಯ, ವೃದ್ಧಾಪ್ಯ ಆರೈಕೆ, ಉಪಶಮನಕಾರಿ ಆರೈಕೆ ಸೇವೆ, ಸುಟ್ಟ ಗಾಯಗಳು, ಅಪಘಾತ ಸೇರಿದಂತೆ ತುರ್ತು ವ್ಯೆದ್ಯಕೀಯ ಸೇವೆಗಳು, ಉಚಿತ ಆರೋಗ್ಯ ತಪಾಸಣೆ , ಪ್ರಯೋಗ ಶಾಲಾ ಸೇವೆಗಳು ಮತ್ತು ಚಿಕಿತ್ಸೆ ದೊರೆಯಲಿವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಇ-ಸಂಜೀವಿನಿ ಹಾಗೂ ಟೆಲಿ ಕೌನ್ಸೆಲಿಂಗ್ ಮೂಲಕ ಕೊಡಿಸುವ ವ್ಯವಸ್ಥೆ ಇಲ್ಲಿದೆ.

Articles You Might Like

Share This Article