ಬೆಂಗಳೂರು,ನ.26- ಎಂಟು ದಿನದೊಳಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡದಿದ್ದರೆ ನಾವು ಕರ್ನಾಟಕಕ್ಕೆ ಸೇರ್ಪಡೆಯಾಗುತ್ತೇವೆ ಎಂದು ನೀರಾವರಿ ಹೋರಾಟ ಸಮಿತಿ ತೆಗೆದುಕೊಂಡಿರುವ ಕ್ರಮ ಮಹಾರಾಷ್ಟ್ರಕ್ಕೆ ತಿರುಗುಬಾಣವಾಗಿದೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲ್ಲೂಕಿನ ಉಮದಿ ಗ್ರಾಮದಲ್ಲಿ ನೀರಾವರಿ ಹೋರಾಟ ಸಮಿತಿಯು ಶುಕ್ರವಾರ ತಡರಾತ್ರಿ ಸಭೆ ನಡೆಸಿದೆ. 8 ದಿನದೊಳಗೆ ಶಾಶ್ವತ ಕುಡಿಯುವ ನೀರು ಸೇರಿದಂತೆ ಬೇಡಿಕೆಯನ್ನು ಈಡೇರಿಸದಿದ್ದರೆ ಇಲ್ಲಿನ 42 ಗ್ರಾಮಗಳನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡುವ ನಿರ್ಣಯವನ್ನು ಸಹ ತೆಗೆದುಕೊಳ್ಳಲಾಗಿದೆ.
ಜತ್, ಅಕಲಕೋಟೆ, ಕೊಲ್ಲಾಪುರ ಸೇರಿದಂತೆ ಸಾಂಗ್ಲಿ ಸುತ್ತಮುತ್ತ ಕನ್ನಡ ಮಾತನಾಡುವ 42ಕ್ಕೂ ಹೆಚ್ಚು ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಬೇಕು, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸ್ವಾಗತಿಸುವುದಾಗಿ ಸಮಿತಿ ಹೇಳಿದೆ.
ಜತ್ ತಾಲ್ಲೂಕಿಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವುದು ಹಾಗೂ ಆ ಭಾಗವನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಿಕೊಳ್ಳಲು ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಹೇಳಿರುವ ಸಿಎಂ ಹೇಳಿಕೆಯನ್ನು ಸ್ವಾಗತಿಸಿದ್ದು, ಶೀಘ್ರದಲ್ಲೇ ಅವರನ್ನು ಇಲ್ಲಿಗೆ ಆಹ್ವಾನಿಸಿ ಸನ್ಮಾನಿಸಲಾಗುವುದು ಎಂದು ಸಮಿತಿ ತಿಳಿಸಿದೆ.
ಎಂಟು ದಿನಗಳೊಳಗೆ ಮಹಾರಾಷ್ಟ್ರ ಸಿಎಂ, ಡಿಸಿಎಂ, ಜಲಸಂಪನ್ಮೂಲ ಸಚಿವರು ಜತ್ತ ತಾಲೂಕಿಗೆ ಬರಬೇಕು. ಜತ್ತ ತಾಲೂಕಿನ ನೀರಿನ ಸಮಸ್ಯೆ ಕುರಿತು ಪರಿಹಾರ ಕಲ್ಪಿಸಬೇಕು. 8 ದಿನಗಳೊಳಗೆ ನಿರ್ಧಾರ ಕೈಗೊಳ್ಳದಿದ್ರೆ ಕರ್ನಾಟಕ ಸಿಎಂರನ್ನು ಜತ್ತ ತಾಲೂಕಿಗೆ ಆಹ್ವಾನಿಸಿ ಕರ್ನಾಟಕ ಸೇರಲು ನಿರ್ಧಾರ ಪ್ರಕಟಿಸುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಲ ಸಂಘರ್ಷ ಸಮಿತಿ ಮುಖಂಡ ಸುನೀಲ್ ಪೋತದಾರ್, ಮಹಾರಾಷ್ಟ್ರ ಸರ್ಕಾರಕ್ಕೆ ನಾಚಿಕೆ ಆಗಬೇಕು ನಾಲ್ಕು ದಶಕಗಳಿಂದ ನೀರು ಕೊಡಲಾಗಿಲ್ಲ. ಉಮದಿಯಲ್ಲಿ ಜತ್ತ ತಾಲೂಕಿನ 42 ಹಳ್ಳಿಗಳ ಪ್ರಮುಖರು ಸಭೆ ಸೇರಿದ್ದೇವೆ. ಕರ್ನಾಟಕಕ್ಕೆ ಸೇರಬೇಕು ಎಂಬುದು ನಮ್ಮ ಇಚ್ಛೆ ಇದೆ. ಮಹಾರಾಷ್ಟ್ರ ಸರ್ಕಾರಕ್ಕೆ ಒಂದು ವಾರದ ಗಡುವು ನೀಡುತ್ತೇವೆ ಎಂದು ಎಚ್ಚರಿಸಿದ್ದಾರೆ.
ಛತ್ತಿಸ್ಗಡದಲ್ಲಿ ಮೂವರು ನಕ್ಸಲರ ಹತ್ಯೆ
ಮಹಾರಾಷ್ಟ್ರ ಸರ್ಕಾರದ ಯಾವುದೇ ಪ್ರತಿನಿಧಿ ನಮ್ಮನ್ನ ಸಂಪರ್ಕಿಸಿಲ್ಲ. ನಾವು ಯಾವುದೇ ಪಕ್ಷಕ್ಕೆ ಸಂಬಂಧಿಸಿದವರಲ್ಲ ಎಂದು ಜಲ ಸಂಘರ್ಷ ಸಮಿತಿ ಮುಖಂಡ ಸುನೀಲ್ ಪೋತದಾರ್ ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕ ಏಕೀಕರಣಕ್ಕೆ ಹೋರಾಡಿ ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ಪಿಂಚಣಿ ಕಾರ್ಯಗತ ಮಾಡಲಾಗು ವುದು. ಎರಡು ರಾಜ್ಯಗಳ ನಡುವೆ ಸೌಹಾರ್ದತೆ ಇದ್ದು, ಎಲ್ಲಾ ಭಾಷಿಕರನ್ನು ಒಂದೇ ರೀತಿಯಲ್ಲಿ ನೋಡಿಕೊಳ್ಳುವಾಗ ಮಹಾರಾಷ್ಟ್ರ ದಲ್ಲಿ ದೊಡ್ಡ ಪ್ರಮಾಣದಲ್ಲಿರುವ ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ಅದನ್ನು ನಾವು ಮಾಡುತ್ತೇವೆ ಎಂದು ಹೇಳಿದ್ದರು.
ಜತ್ ತಾಲೂಕಿನಲ್ಲಿ ತೀವ್ರ ಬರಗಾಲವಿದ್ದು, ಕುಡಿಯುವ ನೀರಿನ ಸಮಸ್ಯೆ ಇದೆ. ನಾವು ನೀರು ಕೊಟ್ಟು ಸಹಾಯ ಮಾಡಬೇಕೆಂದು ಯೋಜನೆ ರೂಪಿಸಲಾಗಿದೆ. ಜತ್ ತಾಲೂಕು ಕರ್ನಾಟಕಕ್ಕೆ ಸೇರಬೇಕೆಂದು ಎಲ್ಲಾ ಗ್ರಾಮ ಪಂಚಾಯಿತಿಗಳು ನಿರ್ಧರಿಸಿದ್ದವು. ನಾವು ಅದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ ಎಂದು ತಿರುಗೇಟು ನೀಡಿದ್ದರು.
ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಸಿದ್ಧತೆ
ಬಸ್ಗಳಿಗೆ ಕಲ್ಲೇಟು:
ಇನ್ನು ಮಹಾರಾಷ್ಟ್ರದಲ್ಲಿ ಕಿಡಿಗೇಡಿಗಳು ಕರ್ನಾಟಕಕ್ಕೆ ಸೇರಿದ ಬಸ್ಗಳಿಗೆ ಕಲ್ಲು ತೂರುವುದು, ಮಸಿ ಬಳಿಯುವ ಕಿಡಿಗೇಡಿತನವನ್ನು ಮುಂದುವರೆಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ಡಿಪೋಗೆ ಸೇರಿದ ಪುಣೆ, ಅಥಣಿ ಹಾಗೂ ಮೀರಜ್-ಕಾಗವಾಡದಿಂದ ತೆರಳಿದ್ದ ಬಸ್ಗಳಿಗೆ ಕಳೆದ ರಾತ್ರಿ ಕೆಲವು ಕಿಡಿಗೇಡಿಗಳು ಕಲ್ಲು ಎಸೆದು ಬಸ್ ಮುಂಭಾಗದ ಗಾಜುಗಳನ್ನು ಒಡೆದು ಹಾಕಿದ್ದಾರೆ.
ಸಿಎಂ ಬೊಮ್ಮಾಯಿ ವಿರುದ್ದ ಕೇಸ್ ದಾಖಲಿಸುವಂತೆ ಸುರ್ಜೆವಾಲ ಒತ್ತಾಯ
ಎರಡು ಬಸ್ಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಕರ್ನಾಟಕದಿಂದ ತೆರಳುವ ಬಸ್ಗಳ ಮೇಲೆ ಮಹಾರಾಷ್ಟ್ರದಲ್ಲಿ ಕಿಡಿಗೇಡಿಗಳು ಹಾನಿ ಉಂಟು ಮಾಡುತ್ತಿರುವ ಹಿನ್ನೆಲೆ ಸದ್ಯಕ್ಕೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
Maharashtra, 42 villages, join, Karnataka,