ಮುಂಬೈ,ಜ.1-ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ದೇಶದಲ್ಲಿ ತಂಗಿದ್ದ ಒಂಬತ್ತು ಬಾಂಗ್ಲಾ ಪ್ರಜೆಗಳನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.
ಇದರೊಂದಿಗೆ, ವಿಶೇಷ ಕಾರ್ಯಾಚರಣೆ ಭಾಗವಾಗಿ 1ತಿಂಗಳಲ್ಲಿ 19 ಪ್ರಕರಣಗಳಲ್ಲಿ 43 ಬಾಂಗ್ಲಾದೇಶಿ ಪ್ರಜೆಗಳನ್ನು ಎಟಿಎಸ್ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ನಾಲ್ಕು ದಿನಗಳಲ್ಲಿ ಮುಂಬೈ, ನಾಸಿಕ್, ನಾಂದೇಡ್ ಮತ್ತು ಛತ್ರಪತಿ ಸಂಭಾಜಿನಗರದ ಸ್ಥಳೀಯ ಪೊಲೀಸರ ಸಹಾಯದಿಂದ ನಡೆದ ಕಾರ್ಯಾಚರಣೆಯಲ್ಲಿ ಒಂಬತ್ತು ಬಾಂಗ್ಲಾದೇಶಿ ಪ್ರಜೆಗಳು ಸೆರೆಯಾಗಿದ್ದು ಅದರಲ್ಲಿ 8 ಪುರುಷರು ಮತ್ತು ಒಬ್ಬ ಮಹಿಳೆ ಎಂದು ಅವರು ಹೇಳಿದರು.
ಆರೋಪಿಗಳು ನಕಲಿ ದಾಖಲೆಗಳನ್ನು ಬಳಸಿ ಆಧಾರ್ ಕಾರ್ಡ್ ಪಡೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರು ಅವರ ವಿರುದ್ಧ ವಿದೇಶಿ ಕಾಯ್ದೆ ಮತ್ತು ಇತರ ಸಂಬಂಧಿತ ಕಾನೂನು ನಿಬಂಧನೆಗಳ ಅಡಿಯಲ್ಲಿ ಐದು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ತಿಳಿಸಿದರು.