ಬೆಂಗಳೂರು,ಡಿ.10- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿ ಸಂಘರ್ಷ ತಾರಕಕ್ಕೇರಿರುವ ಬೆನ್ನಲ್ಲೇ ಸೋಮವಾರ ರಾಜ್ಯ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಲಿದೆ.
ಶುಕ್ರವಾರ ಎನ್‍ಸಿಪಿ ಸಂಸದರ ನಿಯೋಗ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಸೋಮವಾರ ರಾಜ್ಯ ಸಂಸದರು ಕೂಡ ಭೇಟಿಯಾಗಿ ಮಹಾರಾಷ್ಟ್ರದವರು ನಡೆಸುತ್ತಿರುವ ಪುಂಡಾಟಿಕೆಯನ್ನು ಗಮನಕ್ಕೆ ತರಲಿದ್ದಾರೆ. ಇದೇ 14ರಂದು ಮಹಾರಾಷ್ಟ್ರ ಹಾಗೂ ಕರ್ನಾಟಕದ ಸಿಎಂ ಜೊತೆ ಅಮಿತ್ ಷಾ ಅವರು ಗಡಿ ವಿವಾದ ಕುರಿತು ಮಾತುಕತೆ ನಡೆಸಲು ಮುಂದಾಗಿರುವ ಸಂದರ್ಭದಲ್ಲೇ ಸಂಸದರು ಭೇಟಿಯಾಗಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ರಾಜ್ಯದ ಎಲ್ಲ ಸಂಸದರು ಸೋಮವಾರ ಅಮಿತ್ ಷಾ ಅವರನ್ನು ಭೇಟಿಯಾಗಿ ಗಡಿ ವಿವಾದ ಕುರಿತು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬಾರದೆಂದು ಮನವರಿಕೆ ಮಾಡಿಕೊಡುವರು.
ಹಿಮಾಚಲ ಸಿಎಂ ಆಯ್ಕೆ ಜವಾಬ್ದಾರಿ ಪ್ರಿಯಾಂಕ ಹೆಗಲಿಗೆ
ಪ್ರಕರಣವು ನ್ಯಾಯಾಲಯದಲ್ಲಿ ಇರುವ ಕಾರಣ ಕೇಂದ್ರ ಸರ್ಕಾರ ಯಾವುದೇ ನಿರ್ಧಾರವನ್ನು ತೆಗೆದುಕೊಂಡರೆ ಅದು ರಾಜ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹೀಗಾಗಿ ನ್ಯಾಯಾಲಯದಲ್ಲಿ ಇತ್ಯರ್ಥವಾಗುವವರೆಗೂ ಕೇಂದ್ರ ಸರ್ಕಾರ ಕರ್ನಾಟಕದ ಹಿತ ಕಾಪಾಡಬೇಕೆಂದು ಮನವಿ ಮಾಡಿದರು.
ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜೀ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೋಮವಾರ ಭೇಟಿ ಮಾಡುವಂತೆ ರಾಜ್ಯ ಸಂಸದರಿಗೆ ತಿಳಿಸಿದ್ದೇನೆ. ನಾನೂ ಕೂಡ ರಾಜ್ಯದ ನ್ಯಾಯಸಮ್ಮತ ನಿಲುವನ್ನು ತಿಳಿಸಲು ಶೀಘ್ರವೇ ಭೇಟಿ ಮಾಡಲಿದ್ದೇನೆ ಎಂದಿದ್ದಾರೆ.
ಇಷ್ಟು ದಿನ ನೀವು ಪೂಜಿಸಿದ ವಿಗ್ರಹ ಹಿಂದೂ ದೇವರಲ್ಲ. ಅದು ಬುದ್ಧನ ಶಿಲ್ಪ : ಮದ್ರಾಸ್ ಹೈಕೋರ್ಟ್
ಕರ್ನಾಟಕದಲ್ಲಿ ಮಹಾರಾಷ್ಟ್ರಿಗರ ಮೇಲೆ ದಾಳಿಗಳು ನಡೆಯುತ್ತಿವೆ. ಕೂಡಲೇ ಅವರ ರಕ್ಷಣೆಗೆ ಸೂಚಿಸಬೇಕು. ಕರ್ನಾಟಕ ಸಿಎಂ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಎನ್‍ಸಿಪಿಯ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ ಮನವಿ ಮಾಡಿದೆ. ಇದಕ್ಕೆ ಸ್ಪಂದಿಸಿದ ಗೃಹಸಚಿವ ಅಮಿತ್ ಷಾ, ಶೀಘ್ರವೇ ಸಿಎಂಗಳ ಸಭೆ ಕರೆಯುವ ಭರವಸೆ ನೀಡಿದ್ದಾರೆ.
ಮೂಲಗಳ ಪ್ರಕಾರ ಇದೇ ತಿಂಗಳ 14ಕ್ಕೆ ಅಮಿತ್ ಷಾ ಕರ್ನಾಟಕ, ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಮಹಾ ಕ್ಯಾತೆ ಇಲ್ಲಿಗೆ ನಿಂತಿಲ್ಲ. ಲೋಕಸಭೆಯಲ್ಲಿ ಶಿವಸೇನೆ ಸಂಸದ ಧೈರ್ಯಶೀಲ್ ಮಾನೆ ಕರ್ನಾಟಕ ವಿರುದ್ಧ ದ್ವೇಷ ಕಾರಿದ್ದಾರೆ.
ಗಡಿಯಲ್ಲಿ ಕನ್ನಡಪರ ಸಂಘಟನೆಗಳು ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿವೆ. ಮರಾಠಿಗಳು ಆತಂಕದಿಂದ ಜೀವನ ಮಾಡುವಂತಾಗಿದೆ. ಸಿಎಂ ಬೊಮ್ಮಾಯಿ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದಾರೆ. ಕೇಂದ್ರ ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಬೇಕು ಎಂದು ಆಗ್ರಹಿಸಿದ್ದರು.
ಮಾಂಡೌಸ್ ಚಂಡಮಾರುತಕ್ಕೆ ತಮಿಳುನಾಡು ತತ್ತರ
ಇಷ್ಟೆಲ್ಲಾ ಬೆಳವಣಿಗೆ ನಡುವೆಯೂ ರಾಜ್ಯದ 25 ಸಂಸದರು ತುಟಿ ಬಿಚ್ಚಿಲ್ಲ. ಸಂಸತ್‍ನಲ್ಲಿ ಈ ಬಗ್ಗೆ ದನಿ ಎತ್ತುವ ಕೆಲಸ ಮಾಡಿಲ್ಲ. ಆದರೆ ಯಡಿಯೂರಪ್ಪ ಮಾತ್ರ, ನಾವು ಗಡಿ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಕನ್ನಡಪರ ಸಂಘಟನೆಗಳು ಬೆಂಗಳೂರು ಸೇರಿ ಹಲವೆಡೆ ಪ್ರತಿಭಟನೆ ನಡೆಸಿದ್ದರು. ಗಾಂನಗರದಲ್ಲಿ ಬ್ಯಾಂಕ್ ಆಫ್ ಮಹಾರಾಷ್ಟ್ರ ಬ್ಯಾಂಕ್ ಮುತ್ತಿಗೆ ಹಾಕಲು ಯತ್ನಿಸಿದ್ದರು.
maharashtra, border dispute, karnataka, MP meet, Amit Shah,