ಪಾಲ್ಘರ್, ಜೂ.4- ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಪತಿಯನ್ನು ಕೊಂದ ಆರೋಪದ ಮೇಲೆ 42 ವರ್ಷದ ಮಹಿಳೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದಭೇರಿ ಗ್ರಾಮದಲ್ಲಿ ವಾಸವಾಗಿರುವ ದಂಪತಿಗಳು ಕೌಟುಂಬಿಕ ವಿಚಾರದಲ್ಲಿ ಆಗಾಗ್ಗೆ ಜಗಳವಾಡುತ್ತಿದ್ದರು. 47 ವರ್ಷದ ವ್ಯಕ್ತಿ ತನ್ನ ಹೆಂಡತಿಗೆ ಕಿರುಕುಳ ನೀಡುತ್ತಿದ್ದರು ಎಂದು ಜವಾಹರ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‍ಪೆಕ್ಟರ್ ಸುೀಧಿರ್ ಸಂಖೆ ಪಿಟಿಐಗೆ ತಿಳಿಸಿದ್ದಾರೆ.
ಪದೇ ಪದೇ ಕಿರುಕುಳ ನೀಡುತ್ತಿದ್ದರಿಂದ ಸಿಟ್ಟಿಗೆದ್ದ ಮಹಿಳೆ ಶನಿವಾರ ಪತಿಗೆ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ಆರೋಪಿಸಿದ್ದಾರೆ. ನಂತರ ನೆರೆ ಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಕಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗ್ಯಾರಂಟಿ ಹುಮ್ಮಸ್ಸಿನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ತಯಾರಿ
ಪೊಲೀಸರು ಮಹಿಳೆಯ ವಿರುದ್ಧ ಕೊಲೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದು, ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗೆ ಮೊದಲ ಪತಿಗೆ ಇಬ್ಬರು ಪುತ್ರಿಯರಿದ್ದು, ಆತನ ಮರಣದ ನಂತರ ಆಕೆ ಮರುಮದುವೆ ಮಾಡಿಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
#Maharashtra, #woman, #killing, #husband, #Palghar,