MCOCA ಕಾಯ್ದೆ ಆರೋಪಿಗಳಿಗೆ ಜಾಮೀನು ನಿರಾಕರಣೆ

Social Share

ಥಾಣೆ,ಮಾ.13- ಮಹಾರಾಷ್ಟ್ರ ಸಂಘಟಿತ ಅಪರಾಧಗಳ ಕಠಿಣ ನಿಯಂತ್ರಣ (ಎಂಸಿಒಸಿ), ಕೊಲೆ ಯತ್ನ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಆರೋಪದ ಮೇಲೆ ಬಂಧಿತ ವ್ಯಕ್ತಿ ಮತ್ತು ಆತನ ಇಬ್ಬರು ಪುತ್ರರು ಸೇರಿದಂತೆ 16 ಮಂದಿಗೆ ಥಾಣೆ ಜಿಲ್ಲಾ ನ್ಯಾಯಾಲಯವು ಜಾಮೀನನ್ನು ತಿರಸ್ಕರಿಸಿದೆ.

ವಿಶೇಷ ನ್ಯಾಯಾಲಯದ ನ್ಯಾಯಾೀಧಿಶ ಅಮಿತ್ ಶೆಟೆ ಅವರು ಅರ್ಜಿದಾರರಿಗೆ ಜಾಮೀನು ನೀಡಲು ಸಮರ್ಥನಿಯ ಅಂಶಗಳಿಲ್ಲ ಎಂದು ಜಾಮೀನು ಪ್ರಸ್ತಾಪವನ್ನು ತಳ್ಳಿ ಹಾಕಿದ್ದಾರೆ.

ಕಲ್ಯಾಣ್ ಡೊಂಬಿವಲಿ ಮುನ್ಸಿಪಲ್ ಕಾಪೆರ್ರೇಶನ್‍ಗೆ ಚುನಾವಣೆಗೆ ಸ್ರ್ಪಧಿಸುವುದನ್ನು ತಡೆಯುವ ಉದ್ದೇಶದಿಂದ ಆರೋಪಿಯು 2022ರ ನವೆಂಬರ್ 13ರಂದು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್‍ನಾಥ್‍ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ ಮತ್ತು ಮಹಾರಾಷ್ಟ್ರ ಸಂಘಟಿತ ಅಪರಾಧಗಳ ಕಠಿಣ ನಿಯಂತ್ರಣ (ಎಂಸಿಒಸಿ) ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು. ಈಗಾಗಲೇ ಪ್ರಕರಣದ ತನಿಖೆ ನಡೆದಿದ್ದು, ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಆಸ್ಕರ್ ಅಂಗಳದಲ್ಲಿ ಭಾರತೀಯ ಚಿತ್ರಗಳ ಸದ್ದು, ಇಲ್ಲಿದೆ ಪ್ರಶಸ್ತಿಗಳ ಕಂಪ್ಲೀಟ್ ಡೀಟೇಲ್ಸ್

ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ಮಾಡಿದ್ದ ಮನವಿಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಿನಿತ್ ಎ.ಕುಲಕರ್ಣಿ ವಿರೋಧ ವ್ಯಕ್ತಪಡಿಸಿದರು. ನಿಗದಿತ ಅವಧಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಹೀಗಾಗಿ ಆರೋಪಿಗಳು ಜಾಮೀನಿಗೆ ಅರ್ಹರಲ್ಲ ಎಂದು ವಾದಿಸಿದರು.

ಈಗಾಗಲೇ ಜೈಲಿನಲ್ಲಿರುವ ಆರೋಪಿಗಳು ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೂ ಜಾಮೀನು ಪಡೆಯಲು ಅರ್ಹರಲ್ಲ ಎಂದು ಸರ್ಕಾರಿ ಪರ ವಕೀಲರು ವಾದಿಸಿದರು.

Maharashtra, Court, denies, default, bail, MCOCA, accused,

Articles You Might Like

Share This Article