ಮುಂಬೈ.ಏ.6– ಮಹಾರಾಷ್ಟ್ರದ ಕಾಲೇಜೊಂದರ ಬೀಳ್ಕೊಡುಗೆ ಸಮಾರಂಭದಂದು ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.
ಧಾರಾಶಿವ್‌ನಲ್ಲಿರುವ ಕಾಲೇಜಿನಲ್ಲಿ ವಿದ್ಯಾರ್ಥಿನಿ ಭಾಷಣ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪುವ ವಿಡಿಯೋ ಇದೀಗ ವೈರಲ್ ಆಗಿದ್ದು, ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಬಗ್ಗೆ ಕಳವಳ ಸೃಷ್ಟಿಸಿದೆ.
ಭಾಷಣ ಮಾಡುತ್ತಿದ್ದಾಗ ಕುಸಿದುಬಿದ್ದ ವರ್ಷಾ ಎಂಬ ವಿದ್ಯಾರ್ಥಿನಿಯನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದಾಗ ಕಾಲೇಜು ವಿದ್ಯಾರ್ಥಿನಿ ವರ್ಷಾ ಖರತ್ ಪರಂಡದ ಆರ್‌ಜಿ ಶಿಂಧೆ ಕಾಲೇಜಿನಲ್ಲಿ ಸಂತೋಷದಿಂದ ಭಾಷಣ ಮಾಡುತ್ತಿದ್ದಳು.ಇಡೀ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆನ್‌ಲೈನ್‌ನಲ್ಲಿ ಪ್ರಸಾರವಾಗುವ ವೀಡಿಯೊದಲ್ಲಿ ವರ್ಷಾ ಪ್ರಜ್ಞೆ ತಪ್ಪಿ ಕುಸಿದು ಬೀಳುವ ಕ್ಷಣಗಳ ಮೊದಲು ನಗುತ್ತಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವುದು ಕಂಡು ಬಂದಿದೆ.
3