ಮಹಾರಾಷ್ಟ್ರದಲ್ಲೂ ಲವ್ ಜಿಹಾದ್ ವಿರುದ್ಧ ಕಾನೂನಾಸ್ತ್ರ ಜಾರಿ..?

Social Share

ಮುಂಬೈ,ಡಿ.29- ಕರ್ನಾಟಕ, ಗುಜರಾತ್, ಮಧ್ಯಪ್ರದೇಶ ಮಾದರಿಯಲ್ಲಿ ಮಹಾರಾಷ್ಟ್ರದಲ್ಲೂ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮತಾಂತರ ವಿರೋಧಿ ಕಾನೂನು ಜಾರಿಗೆ ತರುವಂತೆ ಒತ್ತಾಯ ಹೆಚ್ಚಾಗುತ್ತಿದೆ.

ಮಹಿಳಾ ನಿಯೋಗದೊಂದಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ ಬಿಜೆಪಿ ಶಾಸಕ ನಿತೇಶ್ ರಾಣೆ ಅವರು ಈ ಒತ್ತಾಯ ಮಾಡಿದ್ದಾರೆ.

ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನಿಗೆ ಒತ್ತಾಯಿಸಿ ಸಂಘಟನೆಗಳು ಪ್ರತಿಭಟನೆಗಳನ್ನು ನಡೆಸುತ್ತಿವೆ. ಮಹಿಳಾ ನಿಯೋಗದೊಂದಿಗೆ ನಾವು ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ಫಡ್ನವಿಸ್ ಅವರಿಗೆ ಕಾನೂನು ಮತ್ತು ಮತಾಂತರ ವಿರೋಧಿ ಕಾನೂನು ಮಾಡುವಂತೆ ಮನವಿ ಮಾಡಿದ್ದೇವೆ ಎಂದು ರಾಣೆ ತಿಳಿಸಿದ್ದಾರೆ.

ಗಡಿ ವಿವಾದ ಕುರಿತು ಸಿಎಂಗೆ ಬೊಮ್ಮಾಯಿಯಿಗೆ ಡಿಕೆಶಿ ಸವಾಲ್

ಶಿಂಧೆ ಹಾಗೂ ಫಡ್ನವಿಸ್ ಅವರು ನಮ್ಮ ಬೇಡಿಕೆ ಈಡೇರಿಕೆ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕೆಲವೇ ತಿಂಗಳುಗಳಲ್ಲಿ ಮತಾಂತರ ವಿರೋಧಿ ಕಾಯ್ದೆ ಜಾರಿಗೆ ಬರುವ ಸಾಧ್ಯತೆಗಳಿವೆ ಅವರು ತಿಳಿಸಿದ್ದಾರೆ.

ಬಲವಂತದ ಮತಾಂತರದ ವಿರುದ್ಧ ಇತರ ರಾಜ್ಯಗಳಲ್ಲಿ ಮಾಡಲಾದ ವಿವಿಧ ಕಾನೂನುಗಳನ್ನು ರಾಜ್ಯ ಸರ್ಕಾರ ಅಧ್ಯಯನ ಮಾಡುತ್ತದೆ ಎಂದು ಫಡ್ನವಿಸ್ ಈ ಹಿಂದೆ ಘೋಷಿಸಿದ್ದರು. ನಾವು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಆದರೆ ಈ ನಿಟ್ಟಿನಲ್ಲಿ ವಿವಿಧ ರಾಜ್ಯಗಳು ಮಾಡಿರುವ ಕಾನೂನುಗಳನ್ನು ಅಧ್ಯಯನ ಮಾಡುತ್ತೇವೆ ಎಂದು ಅವರು ಹೇಳಿದ್ದರು.

ಲೋನ್ ಕೊಡುವುದಾಗಿ ಹಣ ಪಡೆದು ವಂಚನೆ : 6 ಮಂದಿ ವಿರುದ್ಧ ದೂರು

Maharashtra, planning, law, love jihad,

Articles You Might Like

Share This Article