ಗಡಿ ವಿಷಯದಲ್ಲಿ ಪುಂಡಾಟಿಕೆ ಸಹಿಸಲ್ಲ : ಸಿಎಂ ಬೊಮ್ಮಾಯಿ ಎಚ್ಚರಿಕೆ

Social Share

ಬೆಂಗಳೂರು,ನ.25- ಗಡಿ ವಿಷಯದಲ್ಲಿ ಯಾರಾದರೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದರೆ ಸರ್ಕಾರ ಸೂಕ್ತ ಕ್ರಮ ಜರುಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಗಳ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ಎಸೆದು ಮಸಿ ಬಳಿದಿರುವ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಇಂಥ ಪುಂಡಾಟಿಕೆಯನ್ನು ನಾವು ಸಹಿಸುವುದಿಲ್ಲ ಎಂದು ಗುಡುಗಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ಆಯಾ ರಾಜ್ಯ ಸರ್ಕಾರಗಳ ಆದ್ಯ ಕರ್ತವ್ಯ. ಅನಗತ್ಯವಾಗಿ ತೊಂದರೆ ಕೊಟ್ಟರೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದರು.

ಕಾಂಗ್ರೆಸ್‌ ಸಭೆಯಲ್ಲೇ ಹೃದಯಾಘಾತದಿಂದ ಮಾಜಿ ಶಾಸಕ ಶ್ರೀಶೈಲಪ್ಪ ಬಿದನೂರು ನಿಧನ

ಭಾರತ ಒಕ್ಕೂಟ ರಾಷ್ಟ್ರಗಳ ವ್ಯವಸ್ಥೆ ಹೊಂದಿದೆ. ಪ್ರತಿಯೊಂದು ರಾಜ್ಯಗಳು ದೇಶದ ಕಾನೂನಿಗೆ ತಲೆದೂಗಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕೆಲಸ. ಮಹಾರಾಷ್ಟ್ರ ಸರ್ಕಾರ ಇದಕ್ಕೆ ಅವಕಾಶ ಕೊಡಬಾರದು. ಮೊದಲು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದರು.

ನಮ್ಮ ಗಡಿಗಳನ್ನು ರಕ್ಷಣೆ ಮಾಡಲು ಸರ್ಕಾರ ಬದ್ದವಾಗಿದೆ. ನಮ್ಮ ಉದ್ದೇಶವೂ ಕೂಡ ಸ್ಪಷ್ಟವಾಗಿದೆ. ಕಾನೂನು ಹೋರಾಟವನ್ನು ನಾವು ಮುಂದುವರೆಸುತ್ತೇವೆ. ಇದರಲ್ಲಿ ಹಿಂದೆ ಸರಿಯುವ ಮಾತೇ ಇಲ್ಲ ಎಂದು ತಿಳಿಸಿದರು.

ರಾಜ್ಯಗಳ ನಡುವೆ ಶಾಂತಿ ಸೌಹಾರ್ದ ಸಂಬಂಧ ಇರಬೇಕು. ಗಡಿ ಕ್ಯಾತೆ ಮಾಡುವುದನ್ನು ಮಹಾರಾಷ್ಟ್ರ ಸರ್ಕಾರ ಮೊದಲು ನಿಲ್ಲಿಸಲಿ. ನಾವು ಕಾನೂನಿಗೆ ತಲೆ ಬಾಗಬೇಕಾಗುತ್ತದೆ. 2004 ರಲ್ಲಿ ಮಹಾರಾಷ್ಟ್ರವೇ ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಿದ್ದು, ನಾವು ಕೂಡ ಕಾನೂನು ಸಮರವನ್ನು ಮುಂದುವರೆಸಿದ್ದೇವೆ. ಈ ಕಾನೂನು ಹೋರಾಟದಲ್ಲಿ ಗೆಲ್ಲುವ ವಿಶ್ವಾಸ ನಮಗಿದೆ ಎಂದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸುವ ಇಂಗಿತ ವ್ಯಕ್ತಪಡಿಸಿರುವ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸುತ್ತೇವೆ. ಮುಂದಿನ ವಾರ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ತಿಳಿಸಿದರು.

ಬೆಲ್ಟ್ ಹಾಗೂ ದೊಣ್ಣೆಯಿಂದ ವಸತಿ ಶಾಲೆಯ ಮಕ್ಕಳ ಮೇಲೆ ಹಲ್ಲೆ

ನಾವು ಕಾನೂನು ಪಾಲಿಸುವವರಾಗಿದ್ದು, ನಮ್ಮ ಹಕ್ಕುಗಳ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದೇವೆ. ಮಹಾರಾಷ್ಟ್ರ 2004ರಲ್ಲಿ ಪ್ರಕರಣ ದಾಖಲಿಸಿತ್ತು. ನಾವು ನ್ಯಾಯಾಲಯದಲ್ಲಿ ಹೋರಾಡುತ್ತಿದ್ದೇವೆ ಎಂದರು.

ನಮ್ಮ ಮೊದಲ ಆದ್ಯತೆ ಕಾನೂನಾತ್ಮಕ ಹೋರಾಟ ಮಾಡುವುದಾಗಿದೆ. ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣವಿದ್ದಾಗ ಅದರ ತೀರ್ಪಿಗಾಗಿ ಕಾಯಬೇಕು. ಪ್ರಕರಣವು ಅದರ ಅರ್ಜಿಯ ಅರ್ಹತೆಯ ಮೇಲೆ ನಿಂತಿಲ್ಲ, ಬದಲಾಗಿ ಮೆಂಟೇನಬಿಲಿಟಿ ಆಧಾರದ ಮೇಲೆ ನಿಂತಿದೆ. ಕಲಂ 3 ಕೂಡ ಬಹಳ ಸ್ಪಷ್ಟವಾಗಿದೆ. ಸರ್ವೋಚ್ಚ ನ್ಯಾಯಾಲಯವು ಈ ಬಗ್ಗೆ ಒಂದು ನಿರ್ಣಯಕ್ಕೆ ಬರಬೇಕಿದೆ ಎಂದರು.

ಕೇಜ್ರಿವಾಲ್ ಹತ್ಯೆಗೆ ಸಂಚು ಆರೋಪ, ತನಿಖೆಗೆ ಬಿಜೆಪಿ ಆಗ್ರಹ

ಮುಂದಿನ ವಾರದಲ್ಲಿ ಸರ್ವ ಪಕ್ಷ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.

Maharashtra, Karnataka, border, CM Bommai,

Articles You Might Like

Share This Article