ಗಡಿ ವಿವಾದ ಮಾತುಕತೆ ಸಿದ್ದ ಎಂದು ಮತ್ತೊಂದು ಕ್ಯಾತೆ ತೆಗೆದ ಮಹಾ ಸಿಎಂ

Social Share

ಮುಂಬೈ,ನ.24-ಗಡಿ ವಿವಾದವನ್ನೇ ಮುಂದಿಟ್ಟುಕೊಂಡು ಸದಾ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಮಹಾರಾಷ್ಟ್ರ ಇದೀಗ ಬೆಳಗಾವಿ ಗಡಿ ವಿಷಯದಲ್ಲಿ ಮತ್ತೊಂದು ಕ್ಯಾತೆ ತೆಗೆದಿದೆ.

ಹಲವು ದಶಕಗಳಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಕಗ್ಗಂಟಾಗಿಯೇ ಪರಿಣಮಿಸಿರುವ ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ನಾವು ಬದ್ದ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಕರ್ನಾಟಕ ಸರ್ಕಾರ ಬಯಸಿದರೆ ಗಡಿ ವಿವಾದವನ್ನು ಮಾತುಕತೆಯಿಂದಲೇ ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲಾಗುವುದು. ಇದಕ್ಕೆ ಅಲ್ಲಿನ ಸರ್ಕಾರ ಯಾವ ನಿರ್ಧಾರಕ್ಕೆ ಬರುತ್ತದೆ ಎಂಬುದರ ಮೇಲೆ ಅವಲಂಬಿಸಿದೆ ಎಂದಿದ್ದಾರೆ.

ವಿಶೇಷವೆಂದರೆ ಗಡಿ ವಿವಾದವನ್ನು ಸುಪ್ರೀಂಕೋರ್ಟ್ ಅಂಗಳಕ್ಕೆ ಕೊಂಡೊಯ್ದು ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಮಹಾರಾಷ್ಟ್ರ ಸರ್ಕಾರ ಈಗ ಮತ್ತೊಂದು ಅಸ್ತ್ರವನ್ನು ಕರ್ನಾಟಕದ ಮೇಲೆ ಬಿಟ್ಟಿದೆ.

ಹುಡುಕಿಕೊಂಡು ಬಂದು ಮನೆ ಮೇಲೆ ದಾಳಿ ಮಾಡಿದ ಆನೆ

ಎರಡು ರಾಜ್ಯಗಳ ನಡುವೆ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ರಾಜ್ಯಪಾಲರು ಈಗಾಗಲೇ ಒಂದು ಬಾರಿ ಚರ್ಚೆ ನಡೆಸಿದ್ದಾರೆ. ಅದೇ ರೀತಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಒಂದೆಡೆ ಕುಳಿತು ಮಾತುಕತೆ ಮೂಲಕ ಏಕೆ ಚರ್ಚಿಸಬಾರದು. ಚೆಂಡು ಕರ್ನಾಟಕದ ಅಂಗಳದಲ್ಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿರುವ ಮರಾಠಿಗರ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಬೇಕೆಂದು ನಾವು ಸುಪ್ರೀಂಕೋರ್ಟ್‍ನಲ್ಲಿ ಕಾನೂನು ಹೋರಾಟ ನಡೆಸಿದ್ದೇವೆ. ಅಲ್ಲಿ ನಮಗೆ ಮುನ್ನಡೆಯಾಗುತ್ತದೆ ಎಂಬುದು ಮುಖ್ಯವಲ್ಲ. ವಿವಾದವು ಸರ್ವ ಸಮ್ಮತಿಯ ಮೂಲಕ ಪರಿಹರಿಸಬೇಕು ಎಂಬುದು ನಮ್ಮ ನಿಲುವು ಎಂದಿದ್ದಾರೆ.

ನಮ್ಮ ನಿರ್ಧಾರದ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಏನೆಂಬುದು ಗೊತ್ತಿಲ್ಲ. ಆದರೆ ಮರಾಠಿಗರ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಬೇಕೆಂಬ ಹೋರಾಟ ನಿಲ್ಲುವುದಿಲ್ಲ. ಕರ್ನಾಟಕ ಸರ್ಕಾರದ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಶಿಂಧೆ ಸ್ಪಷ್ಟಪಡಿಸಿದ್ದಾರೆ.

ಶಾಲಾ ಮಕ್ಕಳಿಗೆ ಹಾಲಿನ ಪುಡಿ ಬದಲಿಗೆ ಟೆಟ್ರಾಪ್ಯಾಕ್ ಹಾಲು

ಮಹಾರಾಷ್ಟ್ರ ಏಕೀಕರಣ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿರುವವರಿಗೆ ಪಿಂಚಣಿ ಹೆಚ್ಚಿಸಿದ್ದರಲ್ಲಿ ತಪ್ಪೇನಿಲ್ಲ. ಮೊದಲು ಹಿಂದಿನ ಸರ್ಕಾರಗಳು 10 ಸಾವಿರ ರೂ. ನೀಡುತ್ತಿದ್ದವು. ನಾವು 20 ಸಾವಿರ ರೂ.ಗೆ ಏರಿಕೆ ಮಾಡಿದ್ದೇವೆ ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಮುಖ್ಯಮಂತ್ರಿ ಧರ್ಮಾದಾಯ ಸಹಾಯ ನಿಧಿ ಯೋಜನೆಯ ಲಾಭ ಬಂದ್ ಆಗಿತ್ತು. ಅದನ್ನೂ ಮತ್ತೆ ಶುರು ಮಾಡಿದ್ದೇವೆ. ಗಡಿಭಾಗದ ಮರಾಠಿಗರಿಗೆ ಆರೋಗ್ಯ ಸೌಲಭ್ಯ ನೀಡಲು ಮಹಾತ್ಮ ಜ್ಯೋತಿಬಾ ಪುಲೆ ಯೋಜನೆ ನೀಡಲು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗಡಿ ಭಾಗದ ಮರಾಠಿಗರಿಗೆ ಮಹಾರಾಷ್ಟ್ರ ಸರ್ಕಾರದಿಂದ ಸಿಗುವ ಯೋಜನೆಗಳ ಲಾಭ ಹೆಚ್ಚಿಸಿದ್ದೇವೆ. ಮತ್ಯಾರೋ ವಾದ ಸೃಷ್ಟಿಸಿ ಮತ್ತಷ್ಟು ಜಟಿಲಗೊಳಿಸಬಾರದು. ನಾವು ಸಭೆ ನಡೆಸಿದಾಗ ಸಾಕಷ್ಟು ಸಲಹೆಗಳು ಬಂದಿವೆ ಎಂದು ಅವರು ಹೇಳಿದ್ದಾರೆ.

Maharashtra, Karnataka, Border, Dispute, cm eknath shinde,

Articles You Might Like

Share This Article