ನವದೆಹಲಿ,ನ.29- ಗಡಿ ವಿವಾದ ಕುರಿತಂತೆ ಸುಪ್ರೀಂಕೋರ್ಟ್‍ನಲ್ಲಿ ಸಮರ್ಥವಾದ ವಾದ ಮಂಡಿಸಲು ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧ ಪಟ್ಟಂತೆ ರಾಜ್ಯದ ಅಡ್ವೋಕೇಟ್ ಜನರಲ್ ಎಲ್ಲ ವಿವರವನ್ನು ವಿವರಿಸಿದ್ದಾರೆ.
ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹ್ಟಗಿ ಅವರಿಗೆ ಮಾಹಿತಿ ನೀಡಿರುವುದಾಗಿ ಹೇಳಿದರು.
ನಾಳೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ನಡೆಯಲಿದ್ದು, ರಾಜ್ಯದ ಪರವಾಗಿ ಸಮರ್ಥ ವಾದ ಮಂಡಿಸಲು ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ ಎಂದರು.
ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ಮೇಂಟೇನ್ ಎಬಿಲಿಟಿ ಕುರಿತಂತೆ ವಿಚಾರಣೆ ನಡೆಯಲಿದೆ. ಸುಪ್ರೀಂಕೋರ್ಟ್‍ನ ಈ ಹಿಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಅವರು ಮೇಂಟೇನ್ ಎಬಿಲಿಟಿ ವಿಚಾರವನ್ನು ಸಿದ್ದಪಡಿಸಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ದರಾಗಿದ್ದೇವೆ.
ಲೋವಾ ಬೆಟ್ಟದಲ್ಲಿ ಸ್ಪೋಟಗೊಂಡ ಜ್ವಾಲಾಮುಖಿ
ನಾಳೆ ನಡೆಯುವ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕದ ಪರವಾಗಿ ಸಮರ್ಥ ವಾದ ಮಂಡನೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಮಹಾರಾಷ್ಟ್ರದ ನಾಯಕರು ಗಡಿ ವಿಚಾರದಲ್ಲಿ ಗಂಭೀರವಾಗಿದ್ದೇವೆ ಎಂಬುದನ್ನು ತೋರಿಸಿಕೊಳ್ಳಲು ಆ ರೀತಿ ಮಾಡುತ್ತಿದ್ದಾರೆ ಅಷ್ಟೇ ಎಂದ ಅವರು, ರೋಹ್ಟಗಿ ಅವರು ಹಿರಿಯ ವಕೀಲರಾಗಿದ್ದು, ರಾಜ್ಯ ಸರ್ಕಾರ ನೇಮಕ ಮಾಡಿರುವ ಪ್ಯಾನಲ್‍ನಲ್ಲಿ ಇದ್ದಾರೆ ಎಂದರು.
ಮಾತುಕತೆ: ರಾಜ್ಯದ ಸಾರಿಗೆ ಸಂಸ್ಥೆ ಮೇಲೆ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಮಹಾರಾಷ್ಟ್ರ ಗೃಹ ಇಲಾಖೆಯ ಅಕಾರಿಗಳೊಂದಿಗೆ ನಮ್ಮ ರಾಜ್ಯದ ಅಧಿಕಾರಿಗಳು ಮಾತನಾಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಮಹಾರಾಷ್ಟ್ರದ ಜತ್ ತಾಲ್ಲೂಕಿನ 42 ಗ್ರಾಮಸ್ಥರು ಮುಖ್ಯಮಂತ್ರಿ ಭೇಟಿಗೆ ಅವಕಾಶ ಕೋರಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ ಈ ಸಮಸ್ಯೆ ಇಂದು ನಿನ್ನೆಯದಲ್ಲ. ಸೂಕ್ತ ಮೂಲಸೌಲಭ್ಯ ದೊರಕದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಬಹಳ ವರ್ಷಗಳಿಂದಲೇ ಹೇಳಿಕೆ ನೀಡುತ್ತಿದ್ದಾರೆ. ಗಡಿ ವಿವಾದದ ವಿಚಾರ ಸುಪ್ರೀಂಕೋರ್ಟ್‍ನಲ್ಲಿ ಇರುವುದರಿಂದ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.
ಮಹಾರಾಷ್ಟ್ರ ಸಚಿವರು ಬೆಳಗಾವಿ ಪ್ರವೇಶಿಸಿದರೆ ತಕ್ಕ ಪಾಠ: ಕರವೇ ಎಚ್ಚರಿಕೆ
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುತ್ತದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವಿದ್ದಾಗಲೇ ಕುಡಿಯುವ ನೀರು ನೀಡುವ ಬಗ್ಗೆ ನಿರ್ಣಯ ಮಾಡಲಾಗಿತ್ತು. ಅವರು ಏಕೆ ಆ ಗ್ರಾಮಗಳನ್ನು ಸೇರಿಸಿಕೊಂಡಿಲ್ಲ ಎಂದು ಪ್ರಶ್ನಿಸಿದರು.
ಗುಜರಾತ್‍ನಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ: ಖರ್ಗೆ ವಿಶ್ವಾಸ
ಸಿದ್ದರಾಮಯ್ಯ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ. ತಾವು ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ತೀರ್ಮಾನ ಮಾಡಬೇಕು. ಎಲ್ಲವನ್ನು ಸಂವಿಧಾನ ಮತ್ತು ಕಾನೂನಿನಡಿ ಕೈಗೊಳ್ಳಬೇಕಾಗುತ್ತದೆ.
ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸೇರ್ಪಡೆಯಾಗಲು ನಿಯಮಗಳಿದ್ದು ಅವುಗಳನ್ನು ಪಾಲನೆ ಮಾಡಬೇಕಾಗುತ್ತದೆ ಎಂದರು.
Maharashtra, Karnataka, border, dispute, Supreme Court, CM Bommai,