ನವದೆಹಲಿ, ಡಿ.21-ಚೀನಾದ ಮಾದರಿಯಲ್ಲಿ ನಾವು, ಕರ್ನಾಟಕಕ್ಕೆ ನುಗ್ಗುತ್ತೇವೆ. ನಮಗೆ ಯಾರ ಅನುಮತಿಯೂ ಬೇಕಿಲ್ಲ ಎಂದು ಮಹಾರಾಷ್ಟ್ರದ ಶಿವಸೇನೆ ಉದ್ಧವ್ಠಾಕ್ರೆ ಬಣದ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಹೇಳಿದ್ದಾರೆ.
ಸಂಜಯ್ ರಾವತ್ ಅವರ ಉದ್ಧಟತನ ಹೇಳಿಕೆ ಕನ್ನಡಿಗರನ್ನು ಕೆರಳಿಸಿದೆ, ಎರಡು ರಾಜ್ಯಗಳ ಗಡಿ ವಿವಾದಕ್ಕೆ ಮತ್ತಷ್ಟು ತುಪ್ಪ ಸುರಿದಂತಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಜಯ್ ರಾವತ್, ನಾವು ಚರ್ಚೆಯ ಮೂಲಕ ವಿವಾದವನ್ನು ಬಗೆ ಹರಿಸಿಕೊಳ್ಳಬೇಕು ಎಂದು ಬಯಸುತ್ತೇವೆ. ಆದರೆ ಕರ್ನಾಟಕದ ಮುಖ್ಯಮಂತ್ರಿ ಬೆಂಕಿ ಹಚ್ಚುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದೆ. ಗಡಿ ವಿಷಯದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಅದಕ್ಕಾಗಿ ನಾವು ಚೀನಾ ಭಾರತದ ಗಡಿಯೊಳಗೆ ನುಸಳಿದಂತೆ ಕರ್ನಾಟಕ್ಕೆ ನುಗ್ಗುತ್ತೇವೆ. ನಮಗೆ ಯಾರ ಅನುಮತಿಯೂ ಬೇಕಿಲ್ಲ ಎಂದಿದ್ದಾರೆ.
ಕ್ಯಾಲಿಫೋರ್ನಿಯಾದಲ್ಲಿ ಪ್ರಬಲ ಭೂಕಂಪ, ಧರೆಗುರುಳಿದ ಮನೆಗಳು
ಗಡಿ ವಿಷಯದಲ್ಲಿ ಮಹಾರಾಷ್ಟ್ರ ಕಾಲು ಕೆರೆದು ಜಗಳವಾಡುತ್ತಿದೆ. ಅಲ್ಲಿನ ಸಚಿವರು, ಸಂಸದರು ಕರ್ನಾಟಕದ ಗಡಿಗೆ ಭೇಟಿ ನೀಡಿ ಮರಾಠಿಗರನ್ನು ಪ್ರಚೋದಿಸಲು ಯತ್ನಿಸಿದರು. ಅದಕ್ಕೆ ಅವಕಾಶವಾಗದಂತೆ ಬೆಳಗಾವಿ ಜಿಲ್ಲಾಧಿಕಾರಿ ಮಹಾರಾಷ್ಟ್ರ ರಾಜಕಾರಣಿಗಳ ಪ್ರವೇಶಕ್ಕೆ ನಿರ್ಬಂಧ ಹೇರಿದರು. ನಂತರ ಸಂಸದರೊಬ್ಬರು ತಾವು ಬೆಳಗಾವಿಗೆ ಭೇಟಿ ನೀಡಲಿದ್ದು ರಕ್ಷಣೆ ನೀಡುವಂತೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದರು. ಅದಕ್ಕೂ ಜಿಲ್ಲಾಧಿಕಾರಿಗಳು ತಡೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಈ ವೇಳೆ ಬೆಳಗಾವಿಯಲ್ಲಿ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮಹಾಮೇಳವಾ ನಡೆಸಲು ಮುಂದಾಗಿತ್ತು. ಜಿಲ್ಲಾಡಳಿತ ಅದಕ್ಕೂ ಅನುಮತಿ ನೀಡಲಿಲ್ಲ.
“ನನ್ನ ಕೈಗೆ ಶಾರೂಕ್ ಸಿಕ್ಕರೆ ಜೀವಂತ ಸುಡುತ್ತೇನೆ”
ಅತ್ತ ಮಹಾರಾಷ್ಟ್ರದ ನಾಗ್ಪುರದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಅಲ್ಲಿಯೂ ಗಡಿ ವಿವಾದ ಕುರಿತು ಭಾರೀ ಚರ್ಚೆಗಳಾಗುತ್ತಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಹದ್ದು ಮೀರಿದ ಟೀಕೆಗಳು ಕೇಳಿ ಬರುತ್ತಿವೆ. ಈಗ ಸಂಜಯ್ ರಾವತ್ ಕರ್ನಾಟಕಕ್ಕೆ ನುಗ್ಗುವ ಉದ್ಧಟತನದ ಹೇಳಿಕೆ ನೀಡಿ ಕನ್ನಡಿಗರನ್ನು ಕೆರಳಿಸಿದೆ.
#Maharashtra, #KarnatakaBorder, #SanjayRawat,