ಕರ್ನಾಟಕದ ಬಸ್‍ಗಳಿಗೆ ಕಲ್ಲು ತೂರಿ ಮರಾಠಿಗರ ಪುಂಡಾಟ

Social Share

ಬೆಂಗಳೂರು,ನ.25- ಸದಾ ಗಡಿ ವಿವಾದವನ್ನೇ ಮುಂದಿಟ್ಟುಕೊಂಡು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಮಹಾರಾಷ್ಟ್ರ ಮತ್ತೆ ಪುಂಡಾಟಿಕೆ ಮೆರೆದಿದೆ. ಕರ್ನಾಟಕಕ್ಕೆ ಸೇರಿದ ಸಾರಿಗೆ ಸಂಸ್ಥೆಗಳ ಬಸ್‍ಗಳ
ಮೇಲೆ ಕಲ್ಲು ಎಸೆದಿರುವ ಪುಂಡರು, ಜೈ ಮಹಾರಾಷ್ಟ್ರ, ಕರ್ನಾಟಕದ ಖಾನಾಪುರ, ಬೀದರ್ ಮತ್ತು ಬೆಳಗಾವಿ ನಮ್ಮ ರಾಜ್ಯಕ್ಕೆ ಸೇರಬೇಕೆಂದು ಪುಂಡಾಟಿಕೆ ಮಾಡಿದ್ದಾರೆ.

ಪುಣೆ ಜಿಲ್ಲೆಯ ದೌಂಡ್‍ನಲ್ಲಿ ನಿಪಾಣಿ ಔರಂಗಾಬಾದ್ ಬಸ್ ಮೇಲೆ ಜೈ ಮಹಾರಾಷ್ಟ್ರ ಮತ್ತು ಜಾಹಿರ್ ನಿಶೇಧ್ (ಖಂಡನೆ) ಎಂಬ ಪದಗಳನ್ನು ಕಿತ್ತಳೆ ಮತ್ತು ಕಪ್ಪು ಬಣ್ಣದಲ್ಲಿ ಬರೆದಿದ್ದಾರೆ. ಬಸ್ ಮೇಲೆ ಮಹಾರಾಷ್ಟ್ರಕ್ಕೆ ಬೆಂಬಲ ನೀಡುವ ಘೋಷಣೆಗಳನ್ನು ಬರೆದ ನಂತರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧವೂ ಘೋಷಣೆ ಕೂಗಿದ್ದಾರೆ.

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹವಿದೆ ಎಂದು ದೇವೇಂದ್ರ ಫಡ್ನವೀಸ್ ಕೂಡ ತಿಳಿಸಿದ್ದಾರೆ.

ಅಮಾನತುಗೊಂಡ ಟ್ವಿಟರ್ ಖಾತೆಗಳು ಮರು ಸ್ಥಾಪನೆಯಾಗಲಿವೆ

ಮಹಾರಾಷ್ಟ್ರ ಸರ್ಕಾರ 2004ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ದರಾಗಿದ್ದೇವೆ ಎಂದು ಎಚ್ಚರಿಸಿದ್ದಾರೆ.

ನೀರಿನ ಸಮಸ್ಯೆ ಎದುರಿಸುತ್ತಿರುವ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕೆಲವು ಗ್ರಾಮಗಳು ಕರ್ನಾಟಕದೊಂದಿಗೆ ವಿಲೀನಗೊಳಿಸಲು ನಿರ್ಣಯವನ್ನು ಅಂಗೀಕರಿಸಿವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದರು.

ದೇವೇಂದ್ರ ಫಡ್ನವೀಸ್ ಅವರ ಕನಸು ಎಂದಿಗೂ ನನಸಾಗುವುದಿಲ್ಲ ಎಂದಿರುವ ಬಸವರಾಜ ಬೊಮ್ಮಾಯಿ, ಕರ್ನಾಟಕ ಮಹಾರಾಷ್ಟ್ರ ಗಡಿವಿಚಾರದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ ಎಂದಿದ್ದರು.

ಕರ್ನಾಟಕಕ್ಕೆ ಒಂದೇ ಒಂದು ಗ್ರಾಮವನ್ನು ಬಿಟ್ಟುಕೊಡಲ್ಲ. ನಮ್ಮ ನಿಲುವಿನಲ್ಲಿ ಯಾವ ಬದಲಾವಣೆ ಇಲ್ಲ, ಗಡಿ ಗ್ರಾಮಗಳು ಮಹಾರಾಷ್ಟ್ರಕ್ಕೆ ಸೇರಿಸಿಕೊಂಡೇ ತೀರುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರದ ಯಾವುದೇ ಗ್ರಾಮ ಕರ್ನಾಟಕಕ್ಕೆ ಸೇರುವುದಿಲ್ಲ! ಬೆಳಗಾವಿ, ಕಾರವಾರ, ನಿಪಾಣಿ ಸೇರಿದಂತೆ ಮರಾಠಿ ಭಾಷಿಕ ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‍ನಲ್ಲಿ ಪ್ರಬಲ ಹೋರಾಟ ನಡೆಸಲಿದೆ ಎಂದಿದ್ದಾರೆ.

ಇತ್ತ, ಉಭಯ ರಾಷ್ಟ್ರಗಳಲ್ಲಿ ನಾಯಕರು ಪರಸ್ಪರ ವಾಗ್ದಾಳಿ ಆರಂಭಿಸಿದ್ದಾರೆ. ಇನ್ನು, ಈ ಬಗ್ಗೆ ನಿರ್ಣಯ ಕೈಗೊಳ್ಳಲು ಮುಂದಿನವಾರ ಸರ್ವಪಕ್ಷ ಸಭೆ ಕರೆಯುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಜ್ಯೋತಿರಾತ್ಯ ಸಿಂಧಿಯಾ ಘರ್ ವಾಪ್ಸಿ ಸಾಧ್ಯತೆ

ಗಡಿ ಗಲಾಟೆ ಇತ್ಯರ್ಥಕ್ಕೆ ಒಂದು ಕಡೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿರುವ ಮಹಾರಾಷ್ಟ್ರ ಸರಕಾರವು ಮತ್ತೊಂದೆಡೆ ಸಚಿವರ ನಿಯೋಗದೊಂದಿಗೆ ಶೀಘ್ರವೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸಿದೆ.

ಬಾಳಾಸಾಹೇಬ್ ಠಾಕ್ರೆ ಅವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಕೂಗಿಗೆ ಬೆಂಬಲ ನೀಡಿದ್ದರು. ಹಾಗಾಗಿ ಈ ಬಿಕ್ಕಟ್ಟು ಶಮನಕ್ಕೆ ಕೇಂದ್ರೀಕರಿಸುತ್ತಿದ್ದೇವೆ. ಹೆಚ್ಚಿನ ಸಂಖ್ಯೆಯ ವಕೀಲರ ತಂಡವನ್ನು ಸುಪ್ರೀಂ ಕೋರ್ಟ್‍ಗೆ ನಿಯೋಜಿಸಿದ್ದೇವೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.

ಇನ್ನೂ, ಗಡಿ ವಿವಾದ ಬಗ್ಗೆ ಕರ್ನಾಟಕ ಸಿಎಂ ಕೊಟ್ಟಿರುವ ಹೇಳಿಕೆಯನ್ನು ಎರಡೂ ರಾಜ್ಯಗಳು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಇನ್ಮುಂದೆ ಗಡಿ ವಿವಾದ ಇತ್ಯರ್ಥ ಸುಪ್ರೀಂ ಕೋರ್ಟ್‍ನಲ್ಲೇ ಆಗಲಿದೆ. ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ನಿರ್ಣಯ ವಿಚಾರಕ್ಕೆ ಸೂಕ್ತ ಸಾಕ್ಷ್ಯಗಳಿಲ್ಲ ಎಂದು ಮಹಾರಾಷ್ಟ್ರದ ಅಬಕಾರಿ ಸಚಿವ ಶಂಭುರಾಜ್ ದೇಸಾಯಿ ಹೇಳಿದ್ದಾರೆ.

ಇದೇ ವಿಚಾರಕ್ಕೆ ಮಹಾರಾಷ್ಟ್ರ ಪ್ರತಿಪಕ್ಷ ನಾಯಕ ಅಜಿತ್ ಪವಾರ್ ಪ್ರತಿಕ್ರಿಯಿಸಿದ್ದು, ಜತ್ ತಾಲೂಕಿನ ವಿಧಾನಸಭೆ ಕ್ಷೇತ್ರವನ್ನು ಮಹಾರಾಷ್ಟ್ರ ಶಾಸಕರು ಪ್ರತಿನಿಧಿಸುತ್ತಿದ್ದಾರೆ. ಹಾಗಾಗಿ ಜತ್ ಮಹಾರಾಷ್ಟ್ರದ ಅವಿಭಾಜ್ಯ ಅಂಗ ಎನ್ನುವುದು ಸ್ಪಷ್ಟ. ಕರ್ನಾಟಕ ಸಿಎಂ ಹೇಳಿಕೆ ಅರ್ಥಹೀನ, ದುರದೃಷ್ಟಕರ ಎಂದಿದ್ದಾರೆ.

ಮತದಾರರಿಗೆ ತೀರ್ಥಯಾತ್ರೆ, ಪ್ರವಾಸ, ಭರ್ಜರಿ ಉಡುಗೊರೆಗಳ ಭಾಗ್ಯ

ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Maharashtra, Protest, Karnataka, bus, border, dispute,

Articles You Might Like

Share This Article