ರಕ್ತದ ಮಡುವಿನಲ್ಲಿ ಮಹಿಳೆಯ ಮೃತದೇಹ ಪತ್ತೆ

Social Share

ಮಹಾರಾಷ್ಟ್ರ,ಮಾ.3 – ಗಾಯಗೊಂಡ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಕಲ್ವಾ ಬಳಿ ನಡೆದಿದೆ. ನಿನ್ನೆ ಸಂಜೆ ಮನೆಯೊಂದರಲ್ಲಿ ಮೃತ ದೇಹ ಪತ್ತೆಯಾಗಿದ್ದು, ಮೃತ ಮಹಿಳೆಯನ್ನು ಕಮ್‍ಲಿ ಬಾಯಿ ಪವಾರ್(33) ಎಂದು ಗುರುತಿಸಲಾಗಿದೆ.

ಗಾಯಗೊಂಡಿರುವ ಸ್ಥಿತಿಯಲ್ಲಿ ಮಹಿಳೆಯೊಬ್ಬರು ತನ್ನ ಮನೆಯಲ್ಲಿ ಬಿದ್ದಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ರಕ್ತದ ಮಡುವಿನಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ತಂದೆಯಿಂದ ಲೈಂಗಿಕ ಕಿರುಕುಳ: ಮನನೊಂದ ಬಾಲಕಿ ಆತ್ಮಹತ್ಯೆ

ಹರಿತವಾದ ಮಾರಕಾಸ್ತ್ರಗಳಿಂದ ಮಹಿಳೆಯ ಮೇಲೆ ಹಲ್ಲೆ ನಡೆದಿದ್ದು, ಘಟನೆಯ ಹಿಂದಿನ ಕಾರಣ ತಿಳಿದುಬಂದಿಲ್ಲ. ಆರೋಪಿ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Maharashtra, Woman, body, multiple stab, wounds, found,

Articles You Might Like

Share This Article