Thursday, August 21, 2025
Homeರಾಜ್ಯಮಹೇಶ್‌ ಶೆಟ್ಟಿ ತಿಮರೋಡಿ ಬಂಧನ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ

Mahesh Shetty Timarodi has been taken into custody by the police

ಬ್ರಹ್ಮಾವರ, ಆ.21- ಸಾಮಾಜಿಕ ಜಾಲತಾಣದಲ್ಲಿ ಸಮಾಜದ ಗಣ್ಯ ವ್ಯಕ್ತಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಯ ಮುಖಂಡ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಉಜಿರೆಯಲ್ಲಿರುವ ಅವರ ನಿವಾಸಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಎಂಟ್ರಿಕೊಟ್ಟ ಪೊಲೀಸರ ತಂಡ ಅವರನ್ನು ವಶಕ್ಕೆ ಪಡೆಯುವಾಗ ಕೆಲಕಾಲ ಹೈಡ್ರಾಮಾ ನಡೆದಿದೆ. ನೀವು ನನ್ನನ್ನು ಬಂಧಿಸಲು ಬಂದಿದ್ದರೆ ವಾರೆಂಟ್‌ ತೋರಿಸಿ ಎಂದು ಮಹೇಶ್‌ ಶೆಟ್ಟಿ ತಿಮರೋಡಿ ವಾಗ್ವಾದ ನಡೆಸಿದ್ದಾರೆ.

ಈ ವೇಳೆ ಅಲ್ಲಿ ನೆರೆದಿದ್ದ ಹಲವಾರು ಮಂದಿ ಪೊಲೀಸರ ನಡೆಯನ್ನು ಟೀಕಿಸಿ ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ನಾನೇ ಖುದ್ದಾಗಿ ಪೊಲೀಸ್‌ ಠಾಣೆಗೆ ಬರುತ್ತೇನೆ. ನೀವು ಈ ರೀತಿ ಮಾಡುವುದು ಸರಿಯಲ್ಲ ಎಂದಿದ್ದಾರೆ.

ನಂತರ ಸುಮಾರು ಅರ್ಧ ಘಂಟೆ ಕಾಲ ಮಾತುಕತೆ ನಡೆದ ಬಳಿಕ ತಿಮರೋಡಿ ಅವರು ತಮ್ಮ ವಾಹನದಲ್ಲೇ ಪೊಲೀಸ್‌ ಠಾಣೆಗೆ ಬರುವುದಾಗಿ ಹೇಳಿದಾಗ ಅದಕ್ಕೆ ಒಪ್ಪಿ ಖಾಕಿ ಪಡೆ ಅವರ ಹಿಂದೆ ಮುಂದೆ ಜೀಪ್‌ಗಳಲ್ಲಿ ಅವರನ್ನು ಕರೆದೊಯ್ದಿದೆ.

ಬೆಳ್ತಂಗಡಿ ಸೇರಿದಂತೆ ಹಲವಾರು ಕಡೆ ತಿಮರೋಡಿ ವಿರುದ್ಧ ವಿವಿಧ ಪ್ರಕರಣಗಳು ದಾಖಲಾಗಿದ್ದು ಪ್ರಸ್ತುತ ಬಿ.ಎಲ್‌. ಸಂತೋಷ್‌ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್‌ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು.
ಸದ್ಯಕ್ಕೆ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರಿಗೆ ಹಸ್ತಾಂತರ ಮಾಡಿದ ನಂತರ ವಿಚಾರಣೆ ನಡೆಸಿ ಅವರನ್ನು ಬಂಽಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಽಕಾರಿಗೆ ಹರಿರಾಂ ಶಂಕರ್‌ ಈ ಸಂಜೆಗೆ ತಿಳಿಸಿದ್ದಾರೆ.

ಈ ನಡುವೆ ಠಾಣೆಯ ಮುಂದೆ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದ್ದು, ಇಂದು ಸಂಜೆಯೊಳಗೆ ತಿಮರೋಡಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಒಟ್ಟಾರೆ ಈ ಘಟನೆ ಕರಾವಳಿ ಭಾಗದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.

RELATED ARTICLES

Latest News