ನವದೆಹಲಿ, ಆ.28 (ಪಿಟಿಐ) ಹೊಸ ಸಂಸತ್ ಭವನದ ಮುಖ್ಯ ರಚನೆ ಪೂರ್ಣಗೊಂಡಿದ್ದು, ಈಗ ಆಂತರಿಕ ಕಾಮಗಾರಿಯನ್ನು ಪೂರ್ಣಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಟಾಟಾ ಪ್ರಾಜೆಕ್ಟ್ ಸಿಇಒ ವಿನಾಯಕ್ ಪೈತಿಳಿಸಿದ್ದಾರೆ. ಟಾಟಾ ಪ್ರಾಜೆಕ್ಟ್ ಲಿಮಿಟೆಡ್ ಹೊಸ ಸಂಸತ್ ಕಟ್ಟಡವನ್ನು ನಿರ್ಮಿಸುತ್ತಿದ್ದು, ಇದು ಭಾರತದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರತಿಬಿಂಬಿಸುವ ಭವ್ಯವಾದ ಸಂವಿಧಾನ ಭವನವಾಗಲಿದೆ.
ಸಂಸತ್ತಿನ ಸದಸ್ಯರಿಗೆ ವಿಶ್ರಾಂತಿ ಕೋಣೆ, ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು, ಊಟದ ಪ್ರದೇಶಗಳು ಮತ್ತು ಸಾಕಷ್ಟು ಪಾರ್ಕಿಂಗ್ ಸ್ಥಳಗಳನ್ನು ಈ ಭವನ ಹೊಂದಿದೆ. ಹೊಸ ಸಂಸತ್ತಿನ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ನಾವು ಈಗ ಸಾಕಷ್ಟು ಆಂತರಿಕ ಫಿನಿಶಿಂಗ್ ಕೆಲಸಗಳನ್ನು ತ್ವರಿತಗತಿಯಲ್ಲಿ ನಡೆಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಕೇಂದ್ರ ವಿಸ್ಟಾ ಪುನರಾಭಿವೃದ್ಧಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಹೊಸ ಕಟ್ಟಡದಲ್ಲಿ ಸಂಸತ್ತಿನ ಚಳಿಗಾಲದ ಅವೇಶನ ನಡೆಯಲಿದೆ ಎಂದು ಸರ್ಕಾರ ಹೇಳಿಕೊಂಡಿದೆ.