ಕೊಚ್ಚಿ, ಆ.2- (ಪಿಟಿಐ) ಮಲಯಾಳಂ ಚಲನಚಿತ್ರ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್‌ನಿನ್ನಿ ಸಂಜೆ ಚೊಟ್ಟನಿಕ್ಕರದಲ್ಲಿರುವ ಹೋಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ನವಾಸ್ (51) ಸಿನಿಮಾ ಚಿತ್ರೀಕರಣಕ್ಕಾಗಿ ತಂಗಿದ್ದ ಹೋಟೆಲ್‌ನ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸರು ಅವರಿಗೆ ಹೃದಯಾಘಾತವಾಗಿದೆ ಎಂದು ಶಂಕಿಸಿದ್ದಾರೆ.
ಬಹುಮುಖ ಪ್ರತಿಭೆಯ ಮನರಂಜನಾಕಾರರಾಗಿದ್ದ ನವಾಸ್, ಮಲಯಾಳಂ ಚಿತ್ರರಂಗದಲ್ಲಿ ಮಿಮಿಕ್ರಿ ಕಲಾವಿದ, ಹಿನ್ನೆಲೆ ಗಾಯಕ ಮತ್ತು ನಟನಾಗಿ ವ್ಯಾಪಕ ಮೆಚ್ಚುಗೆಯನ್ನು ಗಳಿಸಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವಾರು ಗಣ್ಯರು ಚಿತ್ರರಂಗದ ಕಲಾವಿದರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
- ಅಭಿವೃದ್ಧಿ ಕಾಣದ ದೇವರಾಜ ಅರಸ್ ಅವರ ಮನೆ
- ದಲಿತ ಅಥವಾ ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ನೀಡಲು ಆಗ್ರಹ
- ಕುರ್ಚಿ ಕಿತ್ತಾಟದಲ್ಲಿ ರೈತರನ್ನು ಮರೆತ ಸರ್ಕಾರ : ಆರ್.ಅಶೋಕ್
- ಬಾಣಲಿ ಹೆಲ್ಮೆಟ್ ಸವಾರನಿಗಾಗಿ ಪೊಲೀಸರ ಶೋಧ
- ವೈದ್ಯೆ ಕೃತಿಕಾರೆಡ್ಡಿ ಕೊಲೆ ಪ್ರಕರಣ : ಪತಿಯ ಕರಾಳ ಮುಖ ಬಹಿರಂಗ
