Thursday, June 20, 2024
Homeಅಂತಾರಾಷ್ಟ್ರೀಯಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನ ಸ್ವೀಕರಿಸಿದ ಮಾಲ್ಡೀವ್ಸ್ ಅಧ್ಯಕ್ಷ

ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನ ಸ್ವೀಕರಿಸಿದ ಮಾಲ್ಡೀವ್ಸ್ ಅಧ್ಯಕ್ಷ

ಮಾಲೆ, ಜೂ.8– ಪ್ರಧಾನಿ ನರೇಂದ್ರಮೋದಿಯವರ ಪ್ರಮಾಣ ವಚನ ಸಮಾರಂಭದ ಐತಿಹಾಸಿಕ ಕಾರ್ಯಕ್ರಮಕ್ಕಾಗಿ ತಮ್ಮ ಭಾರತ ಭೇಟಿಯು ದ್ವಿಪಕ್ಷೀಯ ಬಾಂಧವ್ಯ ಸಕಾರಾತಕ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ತೋರಿಸುತ್ತಿದೆ ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್‌ ಮುಯಿಝು ಹೇಳಿದ್ದಾರೆ.

ನವದೆಹಲಿಯಲ್ಲಿ ಪ್ರಧಾನಿ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಆಹ್ವಾನವನ್ನು ಸ್ವೀಕರಿಸಿದ ನಂತರ ಅವರ ಹೇಳಿಕೆಗಳು ಬಂದಿವೆ.ಪ್ರಧಾನಿಯಾಗಿ ಸತತ ಮೂರನೇ ಅವಧಿಗೆ ಮೋದಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ಮೋದಿ ಮತ್ತು ಭಾರತ ಸರ್ಕಾರದ ಮಂತ್ರಿಗಳ ಪರಿಷತ್ತಿನ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಧ್ಯಕ್ಷ ಮುಯಿಝು ಅವರು ಭಾರತದ ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ಅವರ ಕಚೇರಿ ಹೇಳಿಕೆ ತಿಳಿಸಿದೆ.

ಈ ಆಹ್ವಾನಕ್ಕಾಗಿ ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ಭಾರತದೊಂದಿಗಿನ ನಿಕಟ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಪ್ರಧಾನಮಂತ್ರಿಯೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಮಾಲ್ಡೀವ್‌ಸ್‌‍-ಭಾರತದ ಸಂಬಂಧವು ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಈ ಭೇಟಿಯಿಂದ ಸಾಬೀತಾಗಿದೆ. ಆಮಂತ್ರಣವನ್ನು ಖುದ್ದಾಗಿ ತಲುಪಿಸಿದ್ದಕ್ಕಾಗಿ ಅಧ್ಯಕ್ಷರು ಹೈಕಮಿಷನರ್‌ ಅವರಿಗೆ ಧನ್ಯವಾದ ಎಂದು ಮುಯಿಝು ಅವರ ಕಚೇರಿ ತಿಳಿಸಿದೆ.

RELATED ARTICLES

Latest News