28 ದಿನಗಳಲ್ಲಿ ಮಾದಪ್ಪನ ಹುಂಡಿಯಲ್ಲಿ 1.82 ಕೋಟಿ ರೂ. ಕಾಣಿಕೆ ಸಂಗ್ರಹ

ಹನೂರು, ಮಾ.2- ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಮಲೈ ಮಹದೇಶ್ವರಸ್ವಾಮಿ ಹುಂಡಿಯಲ್ಲಿ 28 ದಿನಗಳಲ್ಲಿ 1.82 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಾಲೂರು ಬೃಹನ್ಮಠಾಧ್ಯಕ್ಷರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಕಾರ್ಯದರ್ಶಿ ರಘು ಎ.ಈ.ಗಳ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. 28 ದಿನಗಳಲ್ಲಿ 1.82 ಕೋಟಿ ರೂ. ನಗದು, 41 ಗ್ರಾಂ. ಚಿನ್ನ ಹಾಗೂ 1.200 ಕೆಜಿ ಬೆಳ್ಳಿ ಸಂಗ್ರಹವಾಗಿದೆ.ಅಲ್ಲದೆ, 2000ರೂ. ನೋಟುಗಳು 14 ಹಾಗೂ ಐದು ಪೌಂಡ್ಸ್ … Continue reading 28 ದಿನಗಳಲ್ಲಿ ಮಾದಪ್ಪನ ಹುಂಡಿಯಲ್ಲಿ 1.82 ಕೋಟಿ ರೂ. ಕಾಣಿಕೆ ಸಂಗ್ರಹ