Saturday, August 2, 2025
Homeರಾಷ್ಟ್ರೀಯ | NationalBREAKING : 2008ರ ಮಾಲೆಗಾಂವ್ ಸ್ಫೋಟ ಪ್ರಕರಣ : ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಸೇರಿ ಏಳು...

BREAKING : 2008ರ ಮಾಲೆಗಾಂವ್ ಸ್ಫೋಟ ಪ್ರಕರಣ : ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಸೇರಿ ಏಳು ಆರೋಪಿಗಳು ಖುಲಾಸೆ

Malegaon Verdict: Pragya Thakur, All Accused Acquitted in 2008 Blast Case

ಮುಂಬೈ, ಜು.31- ದೇಶದ ಗಮನ ಸೆಳೆದಿದ್ದ 2008ರ ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ಮಾಲೇಗಾಂವ್ ನ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ 7 ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.17 ವರ್ಷಗಳ ನಂತರ ಸುದೀರ್ಘ ವಿಚಾರಣೆ ನಡೆಸಿದ ನಂತರ ಕಿಕ್ಕಿರಿದು ತುಂಬಿದ್ದ ನ್ಯಾಯಾಲಯದಲ್ಲಿ ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿದ ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎ.ಕೆ.ಲಾಹೋಟಿ ಅವರು ಪ್ರಕರಣದ ಆರೋಪಿಗಳ ವಿರುದ್ಧ ಸಾಕ್ಷಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ ಎಂದು ತೀರ್ಪು ಪ್ರಕಟಿಸಿದರು.

ತೀರ್ಪು ಹೊರಬೀಳುತ್ತಿದ್ದಂತೆ ಕಟಕಟೆಯಲ್ಲಿ ನಿಂತಿದ್ದ ಆರೋಪಿಗಳು ನೆಮ್ಮದಿಯ ನಿಟ್ಟುಸಿರಿನಿಂದ ಹೊರಬಂದರು. ನ್ಯಾಯಾಲಯದ ತೀರ್ಪಿನಿಂದಾಗಿ ದೇಶದಲ್ಲಿ ಕೇಸರಿ ಭಯೋತ್ಪಾದನೆ ನಡೆಯುತ್ತದೆ ಎಂಬ ವಿರೋಧಪಕ್ಷಗಳ ಆರೋಪಕ್ಕೆ ಪೂರ್ಣವಿರಾಮ ಬಿದ್ದಿದೆ.ಈ ಪ್ರಕರಣದ ಆರೋಪಿಗಳ ವಿರುದ್ಧ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ (ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ(ನಿವೃತ್ತ), ಸುಧಾಕರ್ ಚತುರ್ವೇದಿ, ಅಜಯ್ ರಹೀರ್ಕರ್, ಸುಧಾಕರ್ ಧರ್ ದ್ವಿವೇದಿ ಅಲಿಯಾಸ್ ಶಂಕರಾಚಾರ್ಯ ಹಾಗೂ ಸಮೀರ್ ಕುಲಕರ್ಣಿ ಅವರನ್ನು ಪ್ರಕರಣದಿಂದ ಆರೋಪಮುಕ್ತಗ ಳಿಸಲಾಗಿದೆ.ಬಾಂಬ್ ಸ್ಫೋಟವಾಗಿದ್ದ ಸ್ಥಳದಲ್ಲಿ ಸಾದ್ವಿ ಪ್ರಜ್ಞಾ ಸಿಂಗ್ ಅವರ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಅವರಿಗೇ ಸೇರಿದ್ದು ಎಂಬುದಕ್ಕೆ ಸಾಕ್ಷ್ಯಗಳಿಲ್ಲ, ಈ ಘಟನೆ ನಡೆಯುವ ಎರಡು ವರ್ಷಗಳ ಮುನ್ನವೇ ಅವರು ಸನ್ಯಾಸತ್ವವನ್ನು ಸ್ವೀಕರಿಸಿದ್ದರು.

ದ್ವಿಚಕ್ರ ವಾಹನದ ಚಾಸಿ ಸಂಖ್ಯೆಗೂ ಮತ್ತು ತನಿಖಾಧಿಕಾರಿಗಳು ಸೂಚಿಸಿರುವುದಕ್ಕೂ ಒಂದಕ್ಕೊಂದು ತಾಳೆಯಾಗುತ್ತಿಲ್ಲ ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಯಾಗಿದ್ದ ನಿವೃತ್ತ ಮಾಜಿ ಸೇನಾಧಿಕಾರಿ ರಮೇಶ್ ಪುರೋಹಿತ್ ಅವರೇ ಬಾಂಬ್ ಹುದುಗಿಸಿಟ್ಟಿದ್ದರು ಎಂಬುದಕ್ಕೂ ಸಾಕ್ಷ್ಯಾಧಾರಗಳಿಲ್ಲ. ಅಲ್ಲದೆ ಅವರ ಮನೆಯಲ್ಲಿ ಸ್ಫೋಟಕ್ಕೂ ಮುನ್ನ ಬಾಂಬ್ ಸಂಗ್ರಹಿಸಿಡಲಾಗಿತ್ತು ಎಂಬುದಕ್ಕೂ ಸಾಕ್ಷ್ಯಾಧಾರಗಳಿಲ್ಲ.

ಈ ಪ್ರಕರಣದಲ್ಲಿ ಅವರು ಬಾಂಬ್ ತಯಾರಿಸಿದ್ದಕ್ಕೆ ಇಲ್ಲವೇ ಆರ್‌ಡಿಎಕ್ಸ್ ಸ್ಫೋಟಿಸಿದ್ದಕ್ಕೆ ತನಿಖಾಧಿಕಾರಿಗಳು ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ ಎಂದು ಹೇಳಿದ್ದರು. ಇದು ವ್ಯವಸ್ಥಿತ ಪೂರ್ವ ಸಂಚು. ಇಲ್ಲವೇ ಎರಡು ಧರ್ಮಗಳ ನಡುವೆ ಕೋಮು ಸಂಘರ್ಷ ಉಂಟು ಮಾಡಲು ನಡೆಸಿರುವ ಪಿತೂರಿ ಎಂಬುದಕ್ಕೂ ಕೂಡ ಸಾಕ್ಷಿಗಳೂ ಇಲ್ಲ.ನಾಲ್ಕು ತನಿಖಾ ಸಂಸ್ಥೆಗಳು ಪ್ರಕರಣದ ತನಿಖೆ ನಡೆಸಿದ್ದರೂ ಸಾಕ್ಷ್ಯಾಧಾರಗಳನ್ನು ಒದಗಿಸುವಲ್ಲಿ ಮೇಲ್ನೋಟಕ್ಕೆ ವಿಫಲವಾಗಿವೆ. ಹೀಗಾಗಿ ಎಲ್ಲಾ ಆರೋಪಿಗಳನ್ನೂ ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ ಎಂದು ಹೇಳಿದರು.

ಏನಿದು ಪ್ರಕರಣ :
2008ರ ಸೆ. 29ರಂದು ರಂಜಾನ್ ಮಾಸದಲ್ಲಿ ನವರಾತ್ರಿ ಆಚರಣೆಗೆ ಮುನ್ನಾದಿನ ಸ್ಫೋಟ ನಡೆದಿತ್ತು. 6 ಜನರು ಮೃತಪಟ್ಟು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಮುಂಬೈ ಭಯೋತ್ಪಾದಕರ ನಿಗ್ರಹ ಪಡೆ ಪ್ರಾಥಮಿಕ ತನಿಖೆ ನಡೆಸಿದ್ದು, ನಂತರ ಶನಿಖೆಯ ಹೊಣೆಯನ್ನು ಎನ್‌ಐಎ ವಹಿಸಿಕೊಂಡಿತ್ತು. ಬಿಜೆಪಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ (ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ (ನಿವೃತ್ತ) ಸೇರಿದಂತೆ ಏಳು ಮಂದಿ ಆರೋಪಿಗಳ ಮೇಲೆ ಐಪಿಸಿ ಯುಎಪಿಎ ಅನ್ವಯ ಆರೋಪ ಹೊರಿಸಲಾಗಿತ್ತು.ದೇಶದ ಅತಿ ಹೆಚ್ಚು ಕಾಲ ನಡೆಯುತ್ತಿರುವ ಭಯೋತ್ಪಾದನಾ ಪ್ರಕರಣಗಳಲ್ಲಿ ಒಂದಾದ ಏಳು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ, 1860 (ಐಪಿಸಿ) ಅಡಿಯಲ್ಲಿ ಕೊಲೆ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಆರೋಪಗಳ ಮೇಲೆ ಮತ್ತು ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ, 1967 (ಯುಎಪಿಎ) ಅಡಿಯಲ್ಲಿ ವಿಚಾರಣೆ ನಡೆಯುತ್ತಿತ್ತು ಸ್ಥಳೀಯ ಪೊಲೀಸರಿಂದ ತನಿಖೆಯನ್ನು ವಹಿಸಿಕೊಂಡ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಮೋಖ), ಮೋಟಾ‌ರ್ ಸೈಕಲ್‌ ನಲ್ಲಿ ಸುಧಾರಿತ ಸ್ಫೋಟಕ ಸಾಧನೆ ಆಳವಡಿಸಲಾಗಿದೆ ಎಂದು ಶಂಕಿಸಲಾಗಿತ್ತು. ಕೋಮು ಬಿರುಕುಗಳನ್ನು ಉಂಟುಮಾಡುವ ಮತ್ತು ರಾಜ್ಯದ ಆಂತರಿಕ ಭದ್ರತೆಗೆ ಅಪಾಯವನ್ನುಂಟುಮಾಡುವ ಉದ್ದೇಶದಿಂದ, ಬಾಂಬ್ ದಾಳಿ ನಡೆಸಲು ಸಂಚುಕೋರರು ರಂಜಾನ್ ತಿಂಗಳು ಮತ್ತು ನವರಾತ್ರಿಯ ಹಿಂದಿನ ದಿನಗಳನ್ನು ಪ್ರಜ್ಞಾಪೂರ್ವಕವಾಗಿ ಆರಿಸಿಕೊಂಡಿದ್ದಾರೆ ಎಂದು ಶಂಕಿಸಲಾಗಿತ್ತು.


ಆರಂಭದಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ತನಿಖೆಯನ್ನು ನಿರ್ವಹಿಸುತ್ತಿತ್ತು, ಆದರೆ 2011 ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ವರ್ಗಾಯಿಸಲಾಯಿತು. ಮುಂಬೈನ ವಿಶೇಷ ನ್ಯಾಯಾಲಯವು ಆರೋಪಿಗಳ ವಿಚಾರಣೆಯನ್ನು ನಡೆಸಿದ್ದು, ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಮೊಕಾ ) ಅಡಿಯಲ್ಲಿ ಎಟಿಎಸ್ ಹೇರಿದ ಆರೋಪಗಳನ್ನು ನಂತರ ಕೈಬಿಡಲಾಯಿತು. ವಿಚಾರಣೆಯ ಸಮಯದಲ್ಲಿ, ಪ್ರಾಸಿಕ್ಯೂಷನ್ ಪರವಾಗಿ 323 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಯಿತು. ಅದರಲ್ಲಿ 34 ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡಿದ್ದರು. ವಿಶೇಷ ನ್ಯಾಯಾಲಯವು ಅಕ್ಟೋಬರ್ 30, 2018 ರಂದು ಏಳು ಆರೋಪಿಗಳ ವಿರುದ್ಧ ಕಠಿಣ ಯುಎಪಿಎ ಮತ್ತು ಐಪಿಸಿ ಅಡಿಯಲ್ಲಿ ಆರೋಪಗಳನ್ನು ಹೊರಿಸಿತ್ತು.

ಅವರು ಯುಎಪಿಎ ಸೆಕ್ಷನ್ 16 (ಭಯೋತ್ಪಾದಕ ಕೃತ್ಯ ಎಸಗುವುದು) ಮತ್ತು 18 ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುವುದು) ಮತ್ತು ಐಪಿಸಿ ಸೆಕ್ಷನ್ 120 (ಬಿ) (ಕ್ರಿಮಿನಲ್ ಪಿತೂರಿ), 302 (ಕೊಲೆ), 307 (ಕೊಲೆಗೆ ಪ್ರಯತ್ನ), 324 ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು) ಮತ್ತು 153 (ಎ) (ಎರಡು ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಆರಂಭದಲ್ಲಿ, 26/11 ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ವಿಶೇಷ ಪೊಲೀಸ್ ಮಹಾನಿರ್ದೇಶಕ ಹೇಮಂತ್ ಕರ್ಕರೆ ನೇತೃತ್ವದ ಭಯೋತ್ಪಾದನಾ ನಿಗ್ರಹ ದಳ ತನಿಖೆ ನಡೆಸಿತು. ಖಿಖ 2009 ರಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು; ಆದಾಗ್ಯೂ, ನಂತರ, ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಓಯಂ) ಗೆ ವರ್ಗಾಯಿಸಲಾಯಿತು, ಅದು 2016 ರಲ್ಲಿ ಪೂರಕೆ ಆರೋಪಪಟ್ಟಿ ಸಲ್ಲಿಸಿತ್ತು.

ತನ್ನ ಆರೋಪಪಟ್ಟಿಯಲ್ಲಿ, ಎನ್‌ ಬಿಎ ಎಟಿಎಸ್ ತನಿಖೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದರೂ, ಕೆಲವು ಅಂಶಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದು, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಬಿಬಸಿಎ) ಅಡಿಯಲ್ಲಿನ ಆರೋಪಗಳನ್ನು ಕೈಬಿಡಲು ಶಿಫಾರಸು ಮಾಡಿತು. ಅದನ್ನು ನ್ಯಾಯಾಲಯ ಅಂಗೀಕರಿಸಿತ್ತು. ಸಾಕ್ಷ್ಯಾಧಾರಗಳ ವಿಚಾರಣೆಯನ್ನು ಸೆಪ್ಟೆಂಬರ್ 2023 ರಲ್ಲಿ ಮುಕ್ತಾಯಗೊಳಿಸಲಾಗಿತ್ತು. ಇನ್ನು ಮುಂಬಯಿ ಸೆಶನ್ಸ್ ಕೋರ್ಟ್ ಪ್ರಕರಣದ ಇತರೆ ಮೂವರು ಆರೋಪಿಗಳನ್ನು ಎಲ್ಲ ಆಪಾದನೆಗಳಿಂದ ಮುಕ್ತಗೊಳಿಸಿದ್ದು ಶಿವನಾರಾಯಣ ಕಾಲಸಂಗ್ರ, ಶ್ಯಾಮ ಸಾಹು ಮತ್ತು ಪ್ರವೀಣ್ ತಕ್ಕಾಲ್ಕಿ ಅವರುಗಳು ತಮ್ಮ ಮೇಲಿನ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದರು.

ಪ್ರಮುಖ ಆರೋಪಿ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರನ್ನು ಮುಂಬೈನಲ್ಲಿ ಬಂಧಿಸಿದ್ದು ಘಟನೆ ನಡೆದ 9 ವರ್ಷಗಳ ನಂತರ 2017ರ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಇದಕ್ಕೂ ಮುನ್ನ ಇನ್ನೋರ್ವ ಆರೋಪಿ ಸಾಧ್ಯಪ್ರಜ್ಞಾಸಿಂಗ್ ಠಾಕೂರ್ ಅವರಿಗೆ 2017ರ ಏಪ್ರಿಲ್‌ನಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾಗಿತ್ತು ಮುಂಬೈನಿಂದ ಸುಮಾರು 270 ಕಿ.ಮೀ. ದೂರವಿರುವ ಮಾಲೇಗಾಂವ್ ಮುಸ್ಲಿಂ ಸಮುದಾಯ ಹೆಚ್ಚಾಗಿರುವ ಪ್ರಾಂತ್ಯ. ಈ ಪ್ರಾಂತ್ಯದಲ್ಲಿ 2008ರ ಸೆಪ್ಟೆಂಬರ್ 29ರಂದು ಎರಡು ಸ್ಫೋಟಗಳನ್ನು ಅಭಿನವ್ ಭರತ್ ಸಂಘಟನೆ ನಡೆಸಿತ್ತು ಎಂದು ಹೇಳಲಾಗಿತ್ತು. ಈ ಘಟನೆಯಲ್ಲಿ 7 ಮಂದಿ ಸಾವಿಗೀಡಾಗಿದ್ದರು. ಆರಂಭದಲ್ಲಿ ಈ ಸ್ಫೋಟಗಳನ್ನು ಸಿಮಿ (ಸ್ಪೂಡೆಂಟ್ಸ್ ಇಸ್ಲಾಮಿಕ್ ಮೂವ್ ಮೆಂಟ್ ಆಫ್ ಇಂಡಿಯಾ) ನಡೆಸಿತ್ತೆಂದು ಅನುಮಾನಿಸಲಾಗಿತ್ತು. ಆದರೆ, ಪ್ರಕರಣದ ತನಿಖೆಯನ್ನು ನಡೆಸಿದ ಮುಂಬೈ ಪೊಲೀಸರು ಈ ಕೃತ್ಯಕ್ಕೆ ಹಿಂದೂ ಪರ ಸಂಘಟನೆಯೇ ಕಾರಣ ಎಂದು ಆರೋಪಪಟ್ಟಿ ಸಲ್ಲಿಸಿತ್ತು

RELATED ARTICLES

Latest News