ಬೆಂಗಳೂರು,ಜು.19- ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ಹೆಸರು ತರುವ ಸಲುವಾಗಿ ಸಂಸದೆ ಪ್ರಿಯಾಂಕ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಬರ್ಟ್ ವಾದ್ರಾ ಅವರ ಬೆಂಬಲಕ್ಕಿದೆ ಎಂದು ಹೇಳಿದರು.
ಲ್ಯಾಂಡ್ ಜಿಹಾದ್ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಕ್ರಮ ಕೈಗೊಳ್ಳುವುದಾದರೆ ಅದನ್ನು ಸ್ವಾಗತಿಸುತ್ತೇನೆ. ಅವರು ಯಾವಾಗ ಕ್ರಮ ಕೈಗೊಳ್ಳುತ್ತಾರೋ, ಆಗ ಉತ್ತರ ನೀಡುತ್ತೇನೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ರಾಬರ್ಟ್ ವಾದ್ರಾ ವಿರುದ್ಧದ ಕ್ರಿಮಿನಲ್ ಪ್ರಕರಣ ದಾಖಲು ಮಾಡಿರುವುದು ಒಬ್ಬ ವ್ಯಕ್ತಿಯ ಮೇಲೆ ದ್ವೇಷ ಸಾಧಿಸಲು, ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸಲು ಹಾಗೂ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ. ಅದು ಸಾಧ್ಯವಿಲ್ಲ. ದೇಶದಲ್ಲಿ ನ್ಯಾಯಾಲಯಗಳಿವೆ ಎಂದು ಹೇಳಿದರು.
ರಾಬರ್ಟ್ ವಾದ್ರಾ ಅವರಿಗೆ ತೊಂದರೆ ನೀಡುತ್ತಿರುವುದು ಸರಿಯಲ್ಲ. ನಾವೆಲ್ಲಾ ಆತನ ಒಳ್ಳೆಯ ಕೆಲಸಕ್ಕೆ ಬೆಂಬಲ ನೀಡುತ್ತೇವೆ ಎಂದರು.ವಿಧಾನಪರಿಷತ್‌ನ ಸದಸ್ಯರ ನೇಮಕಾತಿಗೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.
- ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಆರ್.ಅಶೋಕ್ ಎಚ್ಚರಿಕೆ
- ದೇವನಹಳ್ಳಿ ತಾಲ್ಲೂಕಿನಲ್ಲಿ ಭೂ ಸ್ವಾಧೀನ ಕೈಬಿಟ್ಟು ಹಸಿರು ವಲಯವಾಗಿ ಮುಂದುವರಿಕೆ : ಎಂ.ಬಿ.ಪಾಟೀಲ್
- ಸೆ.7ರ ರಾತ್ರಿ ಅಪೂರ್ವ ಸಂಭವಿಸಲಿರುವ ಚಂದ್ರಗ್ರಹಣ ಕಣ್ತುಂಬಿಕೊಳ್ಳಲು ಸಾರ್ವಜನಿಕರಲ್ಲಿ ಮನವಿ
- ಮತಪತ್ರ ಬಳಕೆ ಮಾಡುವ ಬಗ್ಗೆ ಬಿಜೆಪಿಯವರಿಗೆ ಆತಂಕವೇಕೆ :ಡಿಕೆಶಿ
- 5.2 ಕೆಜಿ ತೂಕದ ಮಗು ಜನನ : ವೈದ್ಯರು ಅಚ್ಚರಿ