ಮಲ್ಲಿಕಾರ್ಜುನ ಖರ್ಗೆ, ನ್ಯಾ.ಗೋಪಾಲಗೌಡರಿಗೆ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ

Social Share

ಬೆಂಗಳೂರು,ಡಿ.31- ಪ್ರಜಾಪ್ರಭುತ್ವ ಉಳಿಯುವಲ್ಲಿ ಮಾಧ್ಯಮಗಳ ಪಾತ್ರ ಬಹಳ ಪ್ರಮುಖವಾಗಿದೆ. ಮಾಧ್ಯಮ ಗಳು ತಪ್ಪು ಮಾಡದಂತೆ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೆಂಗಳೂರು ಪ್ರೆಸ್‍ಕ್ಲಬ್ ವತಿಯಿಂದ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಮಾಧ್ಯಮ ಕ್ಷೇತ್ರ ಇಂದು ಬೃಹದಾಕಾರವಾಗಿ ಬೆಳೆದಿದೆ. ದೃಶ್ಯಮಾಧ್ಯಮ, ಡಿಜಿಟಲ್ ಮಾಧ್ಯಮ ಸೇರಿ ಹಲವು ಪ್ರಕಾರಗಳಲ್ಲಿ ವಿಸ್ತೃತವಾಗಿ ಬೆಳೆದಿದೆ. ಇಂದು ಪ್ರಜಾಪ್ರಭುತ್ವ ಉಳಿದಿದೆ ಎಂದರೆ ಅದಕ್ಕೆ ಮಾಧ್ಯಮವೂ ಕಾರಣ. ನೀವು ತಪ್ಪು ಮಾಡಬಾರದು. ನೀವು ತಪ್ಪು ಮಾಡಿದರೆ ಸಮಾಜ ಸಂಕಷ್ಟಕ್ಕೆ ಒಳಗಾಗಲಿದೆ ಎಂದು ತಿಳಿ ಹೇಳಿದರು.

ಪ್ರೆಸ್‍ಕ್ಲಬ್ ವತಿಯಿಂದ ಪ್ರಶಸ್ತಿ ಪ್ರದಾನ ಮಾಡುವ ವೇಳೆಯಲ್ಲಿ ಹಿರಿತನವನ್ನು ಕಡೆಗಣಿಸಿದ್ದಕ್ಕೆ ಖರ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು. ಮಲ್ಲಿಕಾರ್ಜುನ ಖರ್ಗೆ ಮತ್ತು ಸುಪ್ರೀಂಕೋರ್ಟ್‍ನ ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ಘೋಷಿಸಲಾಗಿತ್ತು. ಅದೇ ರೀತಿ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಮುರುಗೇಶ್ ನಿರಾಣಿ ಅವರಿಗೆ ವಿಶೇಷ ಪ್ರಶಸ್ತಿ ಘೋಷಿಸಲಾಗಿತ್ತು.

ಮೊದಲು ಪ್ರಮುಖ ಪ್ರಶಸ್ತಿಗಳನ್ನು ಪ್ರದಾನ ಮಾಡಿ ನಂತರ ಉಳಿದ ಪ್ರಶಸ್ತಿಗಳನ್ನು ಪ್ರದಾನ ಮಾಡುವುದು ವಾಡಿಕೆ. ಆದರೆ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೊದಲು ವಿಶೇಷ ಪ್ರಶಸ್ತಿಗೆ ಭಾಜನರಾದ ಸಚಿವರನ್ನು ಸನ್ಮಾನಿಸಲಾಯಿತು. ನಂತರ ವರ್ಷದ ವ್ಯಕ್ತಿ ಪ್ರಶಸ್ತಿ ಪುರಸ್ಕøತರನ್ನು ಸನ್ಮಾನಿಸಲಾಯಿತು.

ಪ್ರಧಾನಿಯಾಗಿದ್ದಾಗಲೇ ತಾಯಿಯನ್ನು ಕಳೆದುಕೊಂಡಿದ್ದ ದೇವೇಗೌಡರು

ಇದಕ್ಕೂ ಮುನ್ನ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ಇಡೀ ದೇಶದಲ್ಲಿ ಅತಿ ಹೆಚ್ಚು ಕೈಗಾರಿಕಾ ಕ್ರಾಂತಿಯಾಗಿರುವುದು ಕರ್ನಾಟಕದಲ್ಲಿ. ಇತ್ತೀಚೆಗೆ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದಗಳಾಗಿವೆ. ಇದರಿಂದ 6 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ರಾಜ್ಯದಲ್ಲಿ ನವೋದ್ಯಮಗಳಿಗೆ ಹೆಚ್ಚಿನ ಬೆಂಬಲ ನೀಡಲಾಗುತ್ತಿದೆ. ರಾಜ್ಯದಲ್ಲಿ 680ಕ್ಕೂ ಹೆಚ್ಚು ಆರ್‍ಎನ್‍ಡಿ ಕೇಂದ್ರಗಳಿವೆ. ಅವುಗಳು ಔದ್ಯೋಗಿಕ ವಲಯದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಲಿವೆ ಎಂದರು. ಕೈಗಾರಿಕಾ ವಲಯದಲ್ಲಿ ತಮ್ಮ ಸಾಧನೆಯನ್ನು ಪರಿಗಣಿಸಿ ಪತ್ರಕರ್ತರು ನೀಡಿರುವ ಪ್ರೋತ್ಸಾಹವನ್ನು ಮರೆಯಲಾಗುವುದಿಲ್ಲ ಎಂದು ಅವರು ಹೇಳಿದರು.

ಸಮಾಜದಲ್ಲಿ ಮಾಧ್ಯಮ ಸಂಪರ್ಕ ಕೊಂಡಿಯಂತೆ ಕೆಲಸ ಮಾಡುತ್ತಿದೆ. ಸಂಕಷ್ಟಗಳನ್ನು ಬಿಂಬಿಸುತ್ತ ಸಮಾಜವನ್ನು ಜಾಗೃತಿಗೊಳಿಸುತ್ತಿದೆ ಎಂದು ಅವರು ತಿಳಿಸಿದರು.

ಮಾಜಿ ಶಾಸಕ ಸುರೇಶ್‍ಗೌಡ ಅವರ ಧಮಕಿ ವಿಡಿಯೋ ವೈರಲ್

ಪ್ರಶಸ್ತಿ ಪ್ರದಾನ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸುಪ್ರೀಂಕೋರ್ಟ್‍ನ ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡರಿಗೆ ಪ್ರೆಸ್‍ಕ್ಲಬ್‍ನ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಚಿವರಾದ ಮುರುಗೇಶ್ ನಿರಾಣಿ ಮತ್ತು ಎಸ್.ಟಿ. ಸೋಮಶೇಖರ್ ಅವರಿಗೆ ವಿಶೇಷ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪತ್ರಕರ್ತರಾದ ಈ ಸಂಜೆಯ ಶಿವಣ್ಣ, ರಾಘವೇಂದ್ರ ತೋಗರ್ಸಿ, ದಿವಾಕರ್, ಎಚ್.ಎಸ್.ಬಲರಾಮ್, ಅಗ್ರಹಾರ ಕೃಷ್ಣಮೂರ್ತಿ, ಶ್ಯಾಮ್ ಭೋಜಪ್ಪ,

ಗಂಗಾಧರ್ ಮೊದಲಿಯಾರ್, ಚನ್ನ ನಾಗರಾಜ್, ಗಾಯತ್ರಿ ನಿವಾಸ್, ಎಚ್.ಮೂರ್ತಿ, ಓಂಕಾರ್ ಕಾಕಡೆ, ಪಿ.ರಾಜಣ್ಣ, ಶಿವಾನಂದ ತಗಡೂರು, ಕೆ.ವಿ.ಪರಮೇಶ್, ರಾಜೇಂದ್ರ, ಬಿ.ಎನ್.ಶ್ರೀಧರ್, ಗಿರಿಪ್ರಕಾಶ್, ಶೋಭಾ,
ಗೌತಮ್ ಮಾಚಯ್ಯ ಸೇರಿದಂತೆ ಮತ್ತಿತರ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

BREAKING : 42 ಐಎಎಸ್ ಅಧಿಕಾರಿಗಳ ವರ್ಗಾವಣೆ

ಕಾರ್ಯಕ್ರಮದಲ್ಲಿ ಒಲಿಂಪಿಕ್ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು, ಯು.ಬಿ.ವೆಂಕಟೇಶ್, ಪ್ರೆಸ್‍ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ, ಉಪಾಧ್ಯಕ್ಷ ಆನಂದ ಬೈದನಮನೆ, ಪದಾಕಾರಿಗಳಾದ ಮೋಹನ್, ದೊಡ್ಡಬೊಮ್ಮಯ್ಯ, ಸೋಮಣ್ಣ, ಮುನಿರಾಮೇಗೌಡ ಮತ್ತಿತರರು ಹಾಜರಿದ್ದರು.

Mallikarjun Kharge, Bengaluru, press club, award,

Articles You Might Like

Share This Article