ನವದೆಹಲಿ,ಡಿ.4- ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿಯೂ ಮುಂದುವರೆಯುವ ಸಾಧ್ಯತೆಗಳು ದಟ್ಟವಾಗಿವೆ. ಉದಯಪುರ್ ಘೋಷಣೆ ಹಾಗೂ ಹಿಂದಿನ ನಿರ್ಧಾರಗಳ ಪ್ರಕಾರ ಕಾಂಗ್ರೆಸ್‍ನಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮವನ್ನು ಚಾಚುತಪ್ಪದೇ ಪಾಲಿಸಲಾಗುತ್ತಿದೆ. ಆದರೆ ಈ ಬಾರಿ ನಿಯಮವನ್ನು ಕೊಂಚ ಸಡಿಸಲು ಚಿಂತನೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ.
ಎಐಸಿಸಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗುತ್ತಿದ್ದಂತೆ ಖರ್ಗೆ ಈ ಹಿಂದೆ ತಾವು ನಿರ್ವಹಿಸುತ್ತಿದ್ದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್, ಜೈರಾಮ್ ರಮೇಶ್ ಸೇರಿದಂತೆ ಅನೇಕರು ಆಕಾಂಕ್ಷಿಗಳಾಗಿದ್ದರು.
ಆದರೆ ಪ್ರಸ್ತುತ ಸಂದರ್ಭದಲ್ಲಿ ಸಂಸತ್‍ನಲ್ಲಿ ಪ್ರಬಲ ದನಿಯೊಂದರ ಅಗತ್ಯ ಇರುವುದರಿಂದ ಖರ್ಗೆ ಅವರೇ ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಮುಂದುವರೆಯುವುದು ಸೂಕ್ತ ಎಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ನಿಯಮಾವಳಿಗಳನ್ನು ಸಡಿಸಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.
ಅನ್ನಭಾಗ್ಯಕ್ಕೆ ಕನ್ನ : ನಕಲಿ ನ್ಯಾಯಬೆಲೆ ಅಂಗಡಿಗಳಿಂದ ರೇಷನ್ ಎತ್ತುವಳಿ
ನಿನ್ನೆ ಸಂಜೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಸಂಸದೀಯ ತಂತ್ರಗಾರಿಕೆಯ ಗುಂಪಿನ ಸಭೆಯಲ್ಲಿ ಔಪಚಾರಿಕ ಚರ್ಚೆಗಳಾಗಿವೆ. ಇಂದು ನಡೆದ ಎಐಸಿಸಿಯ ಸಂಚಲನ ಸಮಿತಿ ಸಭೆಯಲ್ಲೂ ಚರ್ಚೆಗಳಾಗಿವೆ ಎಂದು ಹೇಳಲಾಗಿದೆ.
ಆದರೆ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಜೈರಾಮ್ ಅವರು ಸಭೆಯ ಮಾಹಿತಿ ನೀಡಿ, ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷಗಳನ್ನು ಒಗ್ಗೂಡಿಸುವಲ್ಲಿ ನಿರತರಾಗಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಶೋಭಯಾತ್ರೆಗೆ ಪೊಲೀಸರ ಬಿಗಿ ಬಂದೋಬಸ್ತ್
ಅವರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಲ್ಲದೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿಯೂ ಈ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷದ ನಾಯಕರಾಗಿ ಮುಂದುವರೆಯಲಿದ್ದಾರೆ ಎಂದು ಖಚಿತವಾಗಿ ಹೇಳಲು ಅವರು ನಿರಾಕರಿಸಿದ್ದು, ಈ ಕುರಿತು ಯಾವುದೇ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿಲ್ಲ. ನಿನ್ನೆ ಸಂಜೆ ನಡೆದ ಸಭೆಯಲ್ಲೂ ಚರ್ಚೆಯಾಗಿಲ್ಲ.
ಇಂದು ರಾಜಸ್ಥಾನ ಪ್ರವೇಶಿಸಲಿರುವ ಭಾರತ್ ಜೊಡೊ ಯಾತ್ರೆ
ಪಕ್ಷದ ಪ್ರಮುಖ ನಾಯಕರಾದ ಪಿ.ಚಿದಂಬರಂ, ದಿಗ್ವಿಜಯ್ ಸಿಂಗ್, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಪ್ರಮುಖ ನಾಯಕರು ಭಾರತ ಐಕ್ಯತಾ ಯಾತ್ರೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
Mallikarjun Kharge, Leader, Opposition, Rajya Sabha,