ನವದೆಹಲಿ,ಮಾ.13- ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪವನ್ನು ಪ್ರಮುಖವಾಗಿ ಪ್ರಸ್ತಾಪಿಸಿ ಟೀಕಿಸುತ್ತಿರುವ ಬಿಜೆಪಿಗೆ ತಿರುಗೇಟು ನೀಡಿರುವ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಬಿಜೆಪಿಯವರು ಪ್ರಜಾಪ್ರಭುತ್ವ ಉಳಿಸುವ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಭಾರತದ ಪ್ರಜಾಪ್ರಭುತ್ವದ ಸಂಸ್ಥೆಗಳು ಹಾಗೂ ರಚನೆಗಳು ಬಿಜೆಪಿ ಆಡಳಿತದಲ್ಲಿ ಕ್ರೂರ ದಾಳಿಗೆ ಒಳಗಾಗಿವೆ. ದೇಶದ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ದಾಳಿ ನಡೆಯುತ್ತಿದೆ ಎಂದು ಗಾಂಧಿ ಅವರು ಇತ್ತೀಚೆಗೆ ಲಂಡನ್‍ನಲ್ಲಿ ಆರೋಪಿಸಿದ್ದರು.
ಈ ವಿಷಯ ಕುರಿತು ಸಂಸತ್‍ನಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಮಿತ್ರ ಪಕ್ಷಗಳು ರಾಹುಲ್‍ಗಾಂಧಿ ಕ್ಷಮೆಯಾಚನೆಗೆ ಪಟ್ಟು ಹಿಡಿದು ಗದ್ದಲ ಎಬ್ಬಿಸಿದವು. ಅದರಿಂದ ಕಲಾಪ ಮುಂದೂಡಿಕೆಯಾಗಿತ್ತು.
ಕೇಂದ್ರದಿಂದ ಸಣ್ಣ ಕೈಗಾರಿಕಾ ವಲಯಕ್ಕೆ ಮತ್ತಷ್ಟು ಉತ್ತೇಜನ
ಬಳಿಕ ಕಾಂಗ್ರೆಸ್ ನೇತೃತ್ವದಲ್ಲಿ ಬಿಆರ್‍ಎಸ್, ಎಡಪಕ್ಷಗಳು ಮತ್ತು ಎಎಪಿ ಸೇರಿದಂತೆ ಇತರ ವಿರೋಧ ಪಕ್ಷಗಳ ಸಂಸದರು ಸಂಸತ್ ಭವನದ ಸಂಕೀರ್ಣದಿಂದ ವಿಜಯ್ ಚೌಕ್‍ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ವಿಜಯ್ ಚೌಕ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಅವರು (ಬಿಜೆಪಿ) ಪ್ರಜಾಪ್ರಭುತ್ವವನ್ನು ತುಳಿದು ನಾಶಪಡಿಸುತ್ತಿದೆ. ಮತ್ತೊಂದೆಡೆ ಪ್ರಜಾಪ್ರಭುತ್ವ ಮತ್ತು ದೇಶದ ಹೆಮ್ಮೆಯನ್ನು ಉಳಿಸುವ ಮಾತನಾಡುತ್ತಿದ್ದಾರೆ.
ದೇಶದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ, ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ದೇಶವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗದ ಮೂಲಕ ವಿರೋಧ ಪಕ್ಷಗಳನ್ನು ನಿಗ್ರಹಿಸಲಾಗುತ್ತಿದೆ. ಇದು ಉಲ್ಟಾ ಚೋರ್ ಕೊತ್ವಾಲ್ ಕೋ ದಾಂತೆ (ಇದು ಕಳ್ಳ ಪೊಲೀಸ್‍ನನ್ನು ಕಳ್ಳ ಎಂದು ಕರೆದಂತೆ) ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶದಲ್ಲಿ ಭಾರತವನ್ನು ಹಲವಾರು ಬಾರಿ ಅಪಹಾಸ್ಯ ಮಾಡಿದ್ದಾರೆ. ಚೀನಾ, ದಕ್ಷಿಣ ಕೊರಿಯಾ, ಕೆನಡಾ, ಯುಎಇಯಲ್ಲಿ ಅವರು ಮಾಡಿದ ಭಾಷಣಗಳನ್ನು ನೋಡಬಹುದು ಎಂದು ಖರ್ಗೆ ಆರೋಪಿಸಿದರು.
ಶಾಶ್ವತವಾಗಿ ಮುಚ್ಚಿದ ಅಮೇರಿಕಾದ ಸಿಲಿಕಾನ್ ವ್ಯಾಲಿ ಬ್ಯಾಂಕ್
ಪ್ರಧಾನಿಯವರು ಭಾರತದ ವಿರುದ್ಧ ಎಲ್ಲಾ ರೀತಿಯ ಮಾತುಗಳನ್ನು ಹೇಳಬಹುದಾದರೆ, ರಾಹುಲ್ ಗಾಂಧಿ ಹಾಗೆ ಮಾಡಿದರೆ ಅದು ಏಕೆ ಅಪರಾಧವಾಗುತ್ತದೆ ಎಂದು ಪ್ರಶ್ನಿಸಿದರು. ಅದಾನಿ-ಹಿಂಡೇನ್‍ಬರ್ಗ್ ಹಗರಣದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ಇಂತಹ ವಿಚಾರಗಳನ್ನು ಕೈಗೆತ್ತಿಕೊಳ್ಳುತ್ತಿದೆ.
ನಾವು ಅದಾನಿ ವಿಷಯದ ಬಗ್ಗೆ ಜಂಟಿ ಸದನ ಸಮಿತಿ ತನಿಖಗೆ ಒತ್ತಾಯಿಸುತ್ತಿದ್ದೇವೆ. ಸರ್ಕಾರವು ಇದರಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ. ವಿರೋಧ ಪಕ್ಷಗಳು ಒಟ್ಟಿಗೆ ಇದ್ದು ತನಿಖೆಗೆ ಆಗ್ರಹಿಸಲಿದ್ದೇವೆ.
ರಾಜ್ಯಸಭೆಯಲ್ಲಿ ಸದನದ ನಾಯಕರಿಗೆ 10 ನಿಮಿಷಗಳ ಕಾಲ ಮಾತನಾಡಲು ಅವಕಾಶ ನೀಡಿದೆ ತಾರತಮ್ಯ ಮಾಡಲಾಗುತ್ತಿದೆ. ಪ್ರತಿಪಕ್ಷದ ನಾಯಕರು ಮಾತನಾಡಲು ಎದ್ದು ನಿಲ್ಲುತ್ತಿದ್ದಂತೆ ಸದನವನ್ನು ಮುಂದೂಡಲಾಗಿದೆ ಎಂದು ಕಿಡಿಕಾರಿದರು.
Mallikarjun Kharge, slams, Modi govt, ‘destroying’ democracy, are talking, saving,