ಬೆಂಗಳೂರು, ಜ.13- ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಜ.9ರಂದು ಮೇಕೆದಾಟುವಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಖರ್ಗೆ ಪಾಲ್ಗೊಂಡಿದ್ದರು.
ಅವರಿಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯರ ಸಲಹೆಯಂತೆ ಈಗ ಅವರು ಸದ್ಯ ಹೋಂ ಐಸೊಲೇಷನ್‍ನಲ್ಲಿದ್ದಾರೆ. ಖರ್ಗೆ ಅವರಿಗಲ್ಲದೆ ರಾಜ್ಯಸಭೆಯ ಅವರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ವರಿಗೂ ಕೂಡ ಕೊರೊನಾ ದೃಢಪಟ್ಟಿದೆ ಎಂದು ತಿಳಿದುಬಂದಿದೆ.
