ಕೋಲ್ಕತಾ,ಜ.1- ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನದಂದು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುವ ಜೊತೆಗೆ ದೇಶದ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಸಂಕಲ್ಪ ಮಾಡಿದ್ದಾರೆ.
ಮಮತಾ ಅವರು ಕಾಂಗ್ರೆಸ್ ಪಕ್ಷ ತೊರೆದು 1998ರ ಜನವರಿ 1ರಂದು ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ)ವನ್ನು ಸ್ಥಾಪಿಸಿದರು.
ಪಶ್ಚಿಮ ಬಂಗಾಳ ರಾಜಕೀಯದ ಬೆಂಕಿಚೆಂಡು ಎಂದೇ ಹೆಸರಾಗಿರುವ ಮಮತಾ ಬ್ಯಾನರ್ಜಿ ಅವರು ಟಿಎಂಸಿಯನ್ನು 2021ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ವಿಜಯದತ್ತ ಮುನ್ನಡೆಸಿ ಸತತ ಮೂರನೇ ಅವಗೆ ಮುಖ್ಯಮಂತ್ರಿಯಾಗಿದ್ದಾರೆ.
