Sunday, September 8, 2024
Homeರಾಷ್ಟ್ರೀಯ | Nationalಪುರಿ ಜಗನ್ನಾಥ ಜಾತ್ರೆಯಲ್ಲಿ ಪಟಾಕಿ ಸ್ಫೋಟಕ್ಕೆ ಓರ್ವ ಬಲಿ

ಪುರಿ ಜಗನ್ನಾಥ ಜಾತ್ರೆಯಲ್ಲಿ ಪಟಾಕಿ ಸ್ಫೋಟಕ್ಕೆ ಓರ್ವ ಬಲಿ

ಪುರಿ,ಮೇ.30- ದೇವಸ್ಥಾನದ ಪಟ್ಟಣವಾದ ಪುರಿಯಲ್ಲಿ ತಡರಾತ್ರಿ ಭಗವಾನ್‌ ಜಗನ್ನಾಥನ ಚಂದನ್‌ ಜಾತ್ರಾ ಉತ್ಸವದ ಸಂದರ್ಭದಲ್ಲಿ ಪಟಾಕಿ ಸ್ಫೋಟದಲ್ಲಿ ಓರ್ವ ಭಕ್ತ ಸಾವನ್ನಪ್ಪಿ ಇತರ 23 ಮಂದಿ ಗಾಯಗೊಂಡಿದ್ದಾರೆ.

ನಿನ್ನೆ ರಾತ್ರಿ ಅಪಘಾತ ಸಂಭವಿಸಿದಾಗ ನೂರಾರು ಜನರು ಜಲಾನಯನ ಪ್ರದೇಶವಾದ ನರೇಂದ್ರ ಪುಷ್ಕರಿಣಿಯ ದಡದಲ್ಲಿ ಧಾರ್ಮಿಕ ಕ್ರಿಯೆಗಳನ್ನು ವೀಕ್ಷಿಸಲು ಜಮಾಯಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಭಕ್ತರ ಗುಂಪು ಪಟಾಕಿಗಳೊಂದಿಗೆ ಹಬ್ಬವನ್ನು ಆಚರಿಸುತ್ತಿದ್ದಾಗ, ಇದ್ದಕ್ಕಿದ್ದಂತೆ, ಒಂದು ಕಿಡಿ ಪಟಾಕಿ ರಾಶಿಗೆ ತಗುಲಿ ಭಾರಿ ಸ್ಪೋಟ ಸಂಭವಿಸಿತ್ತು. ಈ ಸಂದರ್ಭದಲ್ಲಿ ಜನ ರಕ್ಷಣೆಗಾಗಿ ಜಲಮೂಲಕ್ಕೆ ಹಾರಿದರು.

ಈ ಘಟನೆಯಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಿಕಿತ್ಸೆಯ ವೆಚ್ಚವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸಲಾಗುವುದು ಎಂದರು.

ಪುರಿ ನರೇಂದ್ರ ಕೊಳದ ಬಳಿ ನಡೆದ ಅಪಘಾತದ ಬಗ್ಗೆ ಕೇಳಿ ವಿಷಾದವಿದೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ವ್ಯವಸ್ಥೆ ಬಗ್ಗೆ ನಿಗಾ ವಹಿಸುವಂತೆ ಮುಖ್ಯ ಆಡಳಿತ ಕಾರ್ಯದರ್ಶಿ ಹಾಗೂ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಗಾಯಾಳುಗಳ ಎಲ್ಲಾ ಚಿಕಿತ್ಸಾ ವೆಚ್ಚವನ್ನು ಮುಖ್ಯಮಂತ್ರಿಗಳ ಪರಿಹಾರದಿಂದ ಭರಿಸಲಾಗುವುದು. ಎಲ್ಲರಿಗೂ ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ ಎಂದು ಪಟ್ನಾಯಕ್‌ ಎಕ್‌್ಸನಲ್ಲಿ ಪೋಸ್ಟ್‌ ಮಾಡಿದ್ದಾರೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಕೂಡ ಘಟನೆಗೆ ಸಂತಾಪ ಸೂಚಿಸಿದ್ದಾರೆ.

ಪುರಿ ಚಂದನ ಯಾತ್ರೆಯ ವೇಳೆ ನರೇಂದ್ರ ಪುಷ್ಕರಿಣಿ ದೇವಿಘಾಟ್‌ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿರುವ ಸುದ್ದಿ ಕೇಳಿ ಬೇಸರವಾಗಿದೆ, ಭಗವಂತನ ಆಶೀರ್ವಾದದಿಂದ ಚಿಕಿತ್ಸೆ ಪಡೆಯುತ್ತಿರುವವರು ಬೇಗ ಗುಣಮುಖರಾಗಿ ಹಿಂತಿರುಗಲಿ ಎಂದು ಹಾರೈಸುತ್ತೇನೆ ಎಂದು ಅವರು X ಮಾಡಿದ್ದಾರೆ.

RELATED ARTICLES

Latest News