ನವದೆಹಲಿ,ಜ.7- ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಮುಂಬೈ ಮೂಲದ ವ್ಯಕ್ತಿ ಶಂಕರ್ ಮಿಶ್ರಾನನ್ನು ತಡರಾತ್ರಿ ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಾಪತ್ತೆಯಾಗಿದ್ದ ಮಿಶ್ರಾನನ್ನು ಬಂಧಿಸಲು ರಚಿಸಲಾಗಿದ್ದ ವಿಶೇಷ ಪೊಲೀಸ್ ತಂಡ ಆತ ಬೆಂಗಳೂರಿನಲ್ಲಿ ಇರುವ ಬಗ್ಗೆ ಬಂದ ಖಚಿತ ಮಾಹಿತಿಯನ್ನಾಧರಿಸಿ ತಡರಾತ್ರಿ ಆತನನ್ನು ಬಂಧಿಸಿ ದೆಹಲಿಗೆ ಕರೆದೊಯ್ದಿದೆ ಎಂದು ಮೂಲಗಳು ತಿಳಿಸಿವೆ.
ಮಿಶ್ರಾ ಮೊಬೈಲ್ ಫೋನ್ ಸ್ವಿಚ್ಆಪ್ ಮಾಡಿದ್ದರೂ ಆತ ತನ್ನ ಸ್ನೇಹಿತರೊಂದಿಗೆ ಸಂವಹನ ನಡೆಸಲು ಬಳಸುತ್ತಿದ್ದ ಸಾಮಾಜಿಕ ಜಾಲತಾಣಗಳ ಆಧಾರದ ಮೇಲೆ ಆತನನ್ನು ಬಂಧಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಕನ್ನಡಕ್ಕೆ ಸ್ಪಂದಿಸದ ಬ್ಯಾಂಕ್ಗಳನ್ನ ಧಿಕ್ಕರಿಸಿ : ದೊಡ್ಡರಂಗೇಗೌಡರು
ಕಳೆದ ನ.26 ರಂದು ಮಿಶ್ರಾ ನ್ಯೂಯಾರ್ಕ್ನಿಂದ ದೆಹಲಿಗೆ ಏರ್ಇಂಡಿಯಾ ವಿಮಾನದಲ್ಲಿ ಬರುತ್ತಿದ್ದಾಗ ಕುಡಿತ ಮತ್ತಿನಲ್ಲಿ ಆತ ವಯಸ್ಸಾದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ನಂತರ ತನ್ನ ತಪ್ಪಿನ ಅರಿವಾಗಿ ಈ ವಿಷಯನ್ನು ಬಹಿರಂಗಪಡಿಸದಂತೆ ಮಹಿಳೆಗೆ ಮನವಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಆದರೂ ವಿಷಯ ಬಹಿರಂಗವಾಗುತ್ತಿದ್ದಂತೆ ಏರ್ ಇಂಡಿಯಾ ಮಿಶ್ರಾ 30 ದಿನಗಳ ಕಾಲ ವಿಮಾನಯಾನ ಮಾಡುವಂತಿಲ್ಲ ಎಂಬ ನಿರ್ಬಂಧ ವಿಧಿಸಿತ್ತು. ಆದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದ ಪರಿಣಾಮ ಆತನ ವಿರುದ್ಧ ದೂರು ದಾಖಲಿಸಿಕೊಂಡು ಬಂಧಿಸಲಾಗಿದೆ ಎನ್ನಲಾಗಿದೆ.
#Man, #Accused, #urinating, #AirIndia, #passenger, #flight, #arrested,