Thursday, September 19, 2024
Homeಬೆಂಗಳೂರುವಿದ್ಯಾರ್ಥಿನಿಯನ್ನು ಅಶ್ಲೀಲವಾಗಿ ಸ್ಪರ್ಶಿಸಿ ಪರಾರಿಯಾಗಿದ್ದವನ ಬಂಧನ

ವಿದ್ಯಾರ್ಥಿನಿಯನ್ನು ಅಶ್ಲೀಲವಾಗಿ ಸ್ಪರ್ಶಿಸಿ ಪರಾರಿಯಾಗಿದ್ದವನ ಬಂಧನ

ಬೆಂಗಳೂರು,ಆ.11– ರಾತ್ರಿ ವೇಳೆ ನಡೆದು ಹೋಗುತ್ತಿದ್ದ ಹೊರ ರಾಜ್ಯದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಅಶ್ಲೀಲವಾಗಿ ಸ್ಪರ್ಶಿಸಿ ಪರಾರಿಯಾಗಿದ್ದ ವಿಕೃತಕಾಮಿಯನ್ನು ಬಂಧಿಸುವಲ್ಲಿ ಸೋಲದೇವನಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಜೇವರ್ಗಿ ಮೂಲದ ಬಸವರಾಜು (28) ಬಂಧಿತ ಆರೋಪಿ. ಈತ ಚಿಕ್ಕಬಾಣಾವಾರದ ಮಾರುತಿನಗರದಲ್ಲಿ ನೆಲೆಸಿದ್ದು, ಅಪೋಲೋ ಮೆಡಿಕಲ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಕಳೆದ ಜು.30 ರಂದು ರಾತ್ರಿ 9 ಗಂಟೆಯಲ್ಲಿ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಪ್ತಗಿರಿ ಕಾಲೇಜು ಸಮೀಪದ ಟ್ಪಾತ್ನಲ್ಲಿ ನಡೆದು ಹೋಗುತ್ತಿದ್ದ ಹೊರ ರಾಜ್ಯದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಅಶ್ಲೀಲವಾಗಿ ಸ್ಪರ್ಶಿಸಿದ್ದ. ಆ ಸಂದರ್ಭದಲ್ಲಿ ಆಕೆ ಕಿರುಚಿಕೊಂಡಾಗ ಆತ ಸ್ವಲ್ಪ ದೂರದಲ್ಲಿ ನಿಲ್ಲಿಸಿದ್ದ ತನ್ನ ಬೈಕ್ ಏರಿ ಪರಾರಿಯಾಗಿದ್ದ.

ಈ ಕುರಿತಂತೆ ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಕಾರ್ಯಚರಣೆ ನಡೆಸಿದ ಪೊಲೀಸರಿಗೆ ಆರೋಪಿಯ ಸುಳಿವು ದೊರೆತಿರಲಿಲ್ಲ. ಆದರೆ, ಇತ್ತಿಚೆಗೆ ಈ ಭಾಗದಲ್ಲಿ ಹೆಚ್ಚುತ್ತಿರುವ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ರಸ್ತೆ ಬದಿಯ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸುವಲ್ಲಿ ಸೋಲದೇವನಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಇತ್ತಿಚೆಗೆ ಈ ಭಾಗದಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕದ ವಿಷಯವಾಗಿದೆ. ಕೆಲವು ದಿನಗಳ ಹಿಂದೆ ಪೀಣ್ಯ ಹಾಗೂ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲ ತಲಾ ಎರಡು ಹಾಗೂ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹದ್ದೇ ಮೂರು ಪ್ರಕರಣಗಳು ನಡೆದಿವೆ ಎಂದು ತಿಳಿದುಬಂದಿದೆ.

RELATED ARTICLES

Latest News