ಮಂಡ್ಯ,ಜು.13- ಚಾಕಲೇಟ್ ಕೊಡಿಸುವುದಾಗಿ ಪುಸಲಾಯಿಸಿ ನಾಲ್ಕು ವರ್ಷದ ಮಗುವನ್ನು ಕರೆದೊಯ್ದು ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಬಂಧಿತನನ್ನು ಉತ್ತರಪ್ರದೇಶ ಮೂಲದ ಪ್ರವೀಣ್(21) ಎಂದು ಗುರುತಿಸಲಾಗಿದೆ.
ಸಂತ್ರಸ್ತ ಮಗುವಿನ ಪೋಷಕರು ಬಿಹಾರ ಮೂಲದವರಾಗಿದ್ದು, ಕಳೆದ ಒಂದೂವರೆ ವರ್ಷದಿಂದ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೇ ಫ್ಯಾಕ್ಟರಿಯಲ್ಲಿ ಬಂಧಿತ ಪ್ರವೀಣ್ ಕೂಡ ಕೆಲಸ ಮಾಡುತ್ತಿದ್ದ. ನಿನ್ನೆ ಮಧ್ಯಾಹ್ನ ಚಾಕಲೇಟ್ ಕೊಡಿಸುತ್ತೇನೆಂದು ಮಗುವನ್ನು ಪುಸಲಾಯಿಸಿ ತನ್ನೊಂದಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಪೊಲೀಸ್ ಕಸ್ಟಡಿ ಸಾವು ವಿರೋಧಿಸಿ ಬೀದಿಗಿಳಿದ ವಿಜಯ್
- ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರ ಆತ್ಮಹತ್ಯೆ
- ಬೆಳಗಾವಿ : ನಡು ರಸ್ತೆಯಲ್ಲೇ ಯುವ ಗಾಯಕನ ಬರ್ಬರ ಹತ್ಯೆ
- ಕಿರು ತೆರೆ ನಟಿ ಶ್ರುತಿ ಮೇಲಿನ ಹಲ್ಲೆಗೆ ನೈಜ ಕಾರಣ ಬಿಚ್ಚಿಟ್ಟ ಪತಿ
- ಬಿಹಾರ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ..!